ಬೆಂಗಳೂರು: ರಾಜಗೋಪಾಲನಗರ ಠಾಣೆಯ ರೌಡಿಶೀಟರ್ ಆಗಿದ್ದ ಸ್ಲಂ ಭರತ, ನಟ ಯಶ್ ಹತ್ಯೆಗೂ ಸಂಚು ರೂಪಿಸಿದ್ದ.
ಉತ್ತರ ವಿಭಾಗದ ಪೊಲೀಸರ ಎನ್‌ಕೌಂಟರ್‌ಗೆ ಬಲಿಯಾಗಿರುವ ಭರತ, ಕೆಲ ತಿಂಗಳ ಹಿಂದಷ್ಟೇ ಯಶ್ ಹತ್ಯೆ ಮಾಡಲು ಸಹಚರರ ಜೊತೆ ಸೇರಿ ಸಂಚು ಹಾಕಿದ್ದ. ಅದರಂತೆ ಹತ್ಯೆಗೆ ತೆರಳುತ್ತಿದ್ದ ವೇಳೆಯಲ್ಲಿ ಸಿಸಿಬಿ ಪೊಲೀಸರು ಆತನನ್ನು ಸೆರೆ ಹಿಡಿದಿದ್ದರು.
ಜಾಮೀನು ಮೇಲೆ ಹೊರಬಂದಿದ್ದ ಆತ, ಪುನಃ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದ. ಜನವರಿಯಲ್ಲಿ ಬನಶಂಕರಿಯಲ್ಲಿ ಸ್ನೇಹಿತರ ಹುಟ್ಟು ಹಬ್ಬದಲ್ಲಿ ಕಾಣಿಸಿಕೊಂಡಿದ್ದ. ಬಂಧಿಸಲು ಹೋದ ಇನ್ ಸ್ಪೆಕ್ಟರ್ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಿದ್ದ. ಮೊನ್ನೆಯಷ್ಟೇ ಉತ್ತರ ಪ್ರದೇಶದಲ್ಲಿ ಆತನನ್ನು ಪೊಲೀಸರು ಬಂಧಿಸಿ ನಗರಕ್ಕೆ ಕರೆತಂದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.