ADVERTISEMENT

ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಗೆ ಎಸ್‌.ಎಂ.ಕೃಷ್ಣ ಹೆಸರು: ಮಹೇಶ ಜೋಶಿ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2024, 3:55 IST
Last Updated 12 ಡಿಸೆಂಬರ್ 2024, 3:55 IST
<div class="paragraphs"><p>ಎಸ್.ಎಂ.ಕೃಷ್ಣ ಅವರ ಭಾವಚಿತ್ರಕ್ಕೆ ಮಹೇಶ ಜೋಶಿ, ತಲಕಾಡು ಚಿಕ್ಕರಂಗೇಗೌಡ ಹಾಗೂ ಕಸಾಪ ಪದಾಧಿಕಾರಿಗಳು ಪುಷ್ಪ ನಮನ ಸಲ್ಲಿಸಿದರು</p></div>

ಎಸ್.ಎಂ.ಕೃಷ್ಣ ಅವರ ಭಾವಚಿತ್ರಕ್ಕೆ ಮಹೇಶ ಜೋಶಿ, ತಲಕಾಡು ಚಿಕ್ಕರಂಗೇಗೌಡ ಹಾಗೂ ಕಸಾಪ ಪದಾಧಿಕಾರಿಗಳು ಪುಷ್ಪ ನಮನ ಸಲ್ಲಿಸಿದರು

   

ಬೆಂಗಳೂರು: ‘ಮಂಡ್ಯದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಎಸ್‌.ಎಂ.ಕೃಷ್ಣ ಅವರ ಉಪಸ್ಥಿತಿ ಸಮ್ಮೇಳನದ ಮೆರಗು ಹೆಚ್ಚಿಸುತ್ತಿತ್ತು. ಆದರೆ, ಈಗ ಅವರ ಹೆಸರನ್ನು ವೇದಿಕೆಗೆ ಇಡುವಂತಹ ಸಂದರ್ಭ ಬಂದಿರುವುದು ನಿಜಕ್ಕೂ ವಿಷಾದಕರ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮಹೇಶ ಜೋಶಿ ಹೇಳಿದರು. 

ಕಸಾಪ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಎಸ್.ಎಂ.ಕೃಷ್ಣ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತ ನಾಡಿದ ಅವರು, ‘87ನೇ ಸಾಹಿತ್ಯ ಸಮ್ಮೇಳನ ನಡೆಯ ಲಿರುವ ನೆಲದಿಂದ ಬಂದಿದ್ದ ಎಸ್.ಎಂ. ಕೃಷ್ಣ ಅವ ರನ್ನು ಸಮ್ಮೇಳನಕ್ಕೆ ಕರೆತರಬೇಕೆಂದು ಸಾಕಷ್ಟು ಪ್ರಯತ್ನಿ ಸಿದ್ದೆ. ಇದಕ್ಕೆ ಸಕಾರಾತ್ಮಕ ಸ್ಪಂದನೆಯೂ ದೊರಕಿತ್ತು.ಸಮ್ಮೇಳನ ಘೋಷಣೆಯಾದ ದಿನದಿಂದಲೂ ಉತ್ಸಾಹ ತೋರಿದ್ದ ಅವರು, ಹಲವು ಉಪಯುಕ್ತ ಸಲಹೆಗಳನ್ನು ನೀಡಿದ್ದರು. ಎಲ್ಲ ರೀತಿಯ ಸಹಕಾರ ನೀಡುವ ಭರವಸೆ ಯನ್ನೂ ನೀಡಿದ್ದರು. ಈಗ ಅವರ ನಿಧನ ದೊಡ್ಡ ಶೂನ್ಯವನ್ನು ಸೃಷ್ಟಿಸಿದೆ’ ಎಂದು ವಿಷಾದ ವ್ಯಕ್ತಪಡಿಸಿದರು.

ADVERTISEMENT

‘ಸುಸಂಸ್ಕೃತ ರಾಜಕಾರಣಿಯಾಗಿದ್ದ ಅವರು, ಕಲೆ ಮತ್ತು ಸಾಹಿತ್ಯದ ಬಗ್ಗೆ ಅಪಾರ ಪ್ರೇಮ ಇಟ್ಟುಕೊಂಡಿದ್ದರು. ಹಲವು ಕ್ಷೇತ್ರಗಳಲ್ಲಿ ಆಳವಾದ ಅಧ್ಯಯನ ನಡೆಸಿದ್ದ ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಾಲ್ಕು ಸಾಹಿತ್ಯ ಸಮ್ಮೇಳನಗಳು ಯಶಸ್ವಿಯಾಗಿ ನಡೆದಿದ್ದವು’ ಎಂದು ಸ್ಮರಿಸಿಕೊಂಡರು.

ಸಂಶೋಧಕ ತಲಕಾಡು ಚಿಕ್ಕರಂಗೇಗೌಡ, ‘ಎಸ್.ಎಂ.ಕೃಷ್ಣ ಅವರು ಉತ್ತಮ ತಬಲಾ ವಾದಕರೂ, ಹವ್ಯಾಸಿ ರಂಗಭೂಮಿ ನಟರೂ ಆಗಿದ್ದರು’ ಎಂದು ಹೇಳಿ, ಜೀವನಶೈಲಿ, ಉಡುಗೆ ತೊಡುಗೆಗಳಲ್ಲಿ ಅವರಿಗಿದ್ದ ಅಭಿರುಚಿಯನ್ನು ವಿವರಿಸಿದರು. 

ಕಸಾಪ ಗೌರವ ಕಾರ್ಯದರ್ಶಿಗಳಾದ ನೇ.ಭ.ರಾಮಲಿಂಗ ಶೆಟ್ಟಿ, ಪದ್ಮಿನಿ ನಾಗರಾಜು, ಗೌರವ ಕೋಶಾಧ್ಯಕ್ಷ ಬಿ.ಎಂ.ಪಟೇಲ್ ಪಾಂಡು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.