ADVERTISEMENT

ಸ್ಮಾರ್ಟ್ ಕಾರ್ಡ್ ಇದ್ದರೆ ವಿಧಾನಸೌಧ ಪ್ರವೇಶ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2019, 2:00 IST
Last Updated 3 ಡಿಸೆಂಬರ್ 2019, 2:00 IST

ಬೆಂಗಳೂರು: ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ನೌಕರರು ಸ್ಮಾರ್ಟ್ ಕಾರ್ಡ್ ಧರಿಸದೆ ಬಂದರೆ ಕಚೇರಿ ಒಳಕ್ಕೆ ಪ್ರವೇಶ ನೀಡದಿರಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ನಿರ್ಧರಿಸಿದೆ.

ಅಧಿಕಾರಿ, ನೌಕರರಿಗೆ ಸ್ಮಾರ್ಟ್ ಕಾರ್ಡ್‌ಗಳನ್ನು ನೀಡಿದ್ದು, ಕಚೇರಿ ಸಮಯದಲ್ಲಿ ಕಡ್ಡಾಯವಾಗಿ ಧರಿಸುವಂತೆ ಸೂಚನೆ ನೀಡಲಾಗಿದೆ. ಆದರೆ ಕೆಲವರು ಧರಿಸದೆಇರುವುದು ಕಂಡುಬಂದಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಇನ್ನು ಮುಂದೆ ಈ ಕಾರ್ಡ್ ಧರಿಸುವುದನ್ನು ಕಡ್ಡಾಯಗೊಳಿಸಿ ಆದೇಶಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT