ಪೀಣ್ಯ ದಾಸರಹಳ್ಳಿ: ಕ್ಷೇತ್ರದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯಗಳ ಜೊತೆಗೆ 100 ಕೊಠಡಿಗಳ ನಿರ್ಮಿಸಲಾಗುತ್ತಿದೆ ಎಂದು ದಾಸರಹಳ್ಳಿ ವಿಧಾನಸಭೆ ಕ್ಷೇತ್ರದ ಶಾಸಕ ಎಸ್. ಮುನಿರಾಜು ತಿಳಿಸಿದರು.
ಅಬ್ಬಿಗೆರೆ ಮತ್ತು ದಾಸರಹಳ್ಳಿ ಸರ್ಕಾರಿ ಪ್ರೌಢ ಶಾಲೆಗಳಿಗೆ 'ಲಾಡ್ಲಿ ಫೌಂಡೇಶನ್' ವತಿಯಿಂದ ₹9 ಲಕ್ಷ ವೆಚ್ಚದಲ್ಲಿ ಅಳವಡಿಸಲಾಗಿರುವ ಸ್ಮಾರ್ಟ್ ಕ್ಲಾಸ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು.
ಲಾಡ್ಲಿ ಫೌಂಡೇಶನ್ ಮುಖ್ಯಸ್ಥ ಸಲ್ಮಾನ್ ಶರೀಫ್ ಮಾತನಾಡಿ, ‘ಸರ್ಕಾರಿ ಶಾಲೆಗಳಲ್ಲಿಯೂ ಕೂಡ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಬೇಕೆನ್ನುವ ಉದ್ದೇಶದಿಂದ ನಮ್ಮ ಸಂಸ್ಥೆಯಿಂದ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಒದಗಿಸಲಾಗಿದೆ’ ಎಂದರು.
ಲಾಡ್ಲಿ ಫೌಂಡೇಶನ್ ಸದಸ್ಯ ಇಮ್ರಾನ್, ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ಶ್ರೀನಿವಾಸ್, ಸ್ಥಳೀಯ ಮುಖಂಡರಾದ ಅಬ್ಬಿಗೆರೆ ಮಂಜುನಾಥ್, ಪಾಲಿಕೆ ಮಾಜಿ ಸದಸ್ಯೆ ಉಮಾದೇವಿ ನಾಗರಾಜು, ನಾಗಣ್ಣ, ಚಂದ್ರಶೇಖರ್, ಎಂ. ಮುನಿರಾಜು, ಹೇಮಾಚಲ ರೆಡ್ಡಿ, ಯತೀಶ್, ರೇಣುಕಮ್ಮ, ಸುರೇಖಾ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.