ADVERTISEMENT

ಸ್ಮಾರ್ಟ್‌ ಪಾರ್ಕಿಂಗ್‌ ಜಾರಿ

​ಪ್ರಜಾವಾಣಿ ವಾರ್ತೆ
Published 18 ಮೇ 2019, 20:05 IST
Last Updated 18 ಮೇ 2019, 20:05 IST

ಬೆಂಗಳೂರು: ಮುಂದಿನ ಆರು ತಿಂಗಳಲ್ಲಿ ನಗರದ 85 ರಸ್ತೆಗಳಲ್ಲಿ ಸ್ಮಾರ್ಟ್‌ ಪಾರ್ಕಿಂಗ್‌ ವ್ಯವಸ್ಥೆ ಜಾರಿಗೆ ಬರಲಿದೆ.

ಸ್ಮಾರ್ಟ್‌ ಪಾರ್ಕಿಂಗ್‌ ನಗರದ ಕೇಂದ್ರ ವಾಣಿಜ್ಯ ಪ್ರದೇಶಗಳಲ್ಲಿ(ಸಿಬಿಡಿ) ವಾಹನಗಳನ್ನು ಅಡ್ಡಾದಿಡ್ಡಿ ನಿಲ್ಲಿಸುವುದರಿಂದ ಉಂಟಾಗುತ್ತಿರುವ ವಾಹನ ದಟ್ಟಣೆ ಕಡಿಮೆ ಮಾಡುವ ಉದ್ದೇಶವನ್ನು ಹೊಂದಿದೆ.

ಬಿಲ್ಡಿಂಗ್‌ ಕಂಟ್ರೋಲ್‌ ಸಲ್ಯೂಷನ್ಸ್‌ ಇಂಡಿಯಾ ಕಂಪೆನಿ ಗುತ್ತಿಗೆ ಪಡೆದಿದ್ದು, ಈ ಕಂಪನಿ ಪ್ರತಿವರ್ಷ ₹31.60 ಕೋಟಿ ಪಾಲಿಕೆಗೆ ನೀಡಬೇಕು. ಇದರಿಂದ ಮುಂದಿನ 10 ವರ್ಷಗಳಲ್ಲಿ ಬಿಬಿಎಂಪಿಯು ₹397.46 ಕೋಟಿ ಆದಾಯ ಪಡೆಯಲಿದೆ ಎಂದು ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.