ADVERTISEMENT

ಹಾವು ಕಡಿತ: ಔಷಧಿ ಪೂರೈಕೆಗೆ ಕ್ರಮ

​ಪ್ರಜಾವಾಣಿ ವಾರ್ತೆ
Published 18 ಜನವರಿ 2020, 5:41 IST
Last Updated 18 ಜನವರಿ 2020, 5:41 IST
   

ಬೆಂಗಳೂರು: ಹಾವು ಹಾಗೂ ಇತರ ವಿಷ ಜಂತುಗಳ ಕಡಿತಕ್ಕೆ ನೀಡುವ ಔಷಧಿ ಕೊರತೆ ನೀಗಿಸಲು ಕ್ರಮಕೈಗೊಳ್ಳಲಾಗಿದ್ದು, ಇನ್ನು ಮುಂದೆ ಇಲಾಖೆಯ ಮೂಲಕವೇ ಸರಬರಾಜು ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಶುಕ್ರವಾರ ತಿಳಿಸಿದರು.

ಕೆಲವು ಸಮಸ್ಯೆಗಳಿಂದಾಗಿ ಜಿಲ್ಲಾ ಆಸ್ಪತ್ರೆಗಳಲ್ಲಿರುವ ಸಮಿತಿ ಮೂಲಕ ಖರೀದಿಸಿ ಆಯಾ ಜಿಲ್ಲೆಗಳ ವ್ಯಾಪ್ತಿಯ ಆರೋಗ್ಯ ಕೇಂದ್ರಗಳು ಹಾಗೂ ಇತರ ಆಸ್ಪತ್ರೆಗಳಿಗೆ ವಿತರಣೆ ಮಾಡುವ ವ್ಯವಸ್ಥೆ ಮಾಡಲಾಗಿತ್ತು. ಆದರೆ ಸಮರ್ಪಕವಾಗಿ ಔಷಧಿ ಸಿಗದಿರುವ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಇಲಾಖೆಯಿಂದಲೇ ನೇರವಾಗಿ ಖರೀದಿಸಿ ವಿತರಣೆ ಮಾಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಪಿಂಕ್ ಬಸ್ ಯೋಜನೆ: ಮಹಿಳೆಯರು ಮತ್ತು ಮಕ್ಕಳಿಗೆ ಮತ್ತಷ್ಟು ಆರೋಗ್ಯ ಸೌಲಭ್ಯ ಒದಗಿಸುವ ಸಲುವಾಗಿ ‘ಪಿಂಕ್ ಬಸ್’ ಯೋಜನೆಯನ್ನು ಜಾರಿಗೆ ತರಲಾಗುವುದು. ಈ ಬಗ್ಗೆ ಬಜೆಟ್‌ನಲ್ಲಿ ಹಣ ಒದಗಿಸಲಾಗುವುದು ಎಂದರು.

ADVERTISEMENT

ಆರೋಗ್ಯ ಕಾರ್ಡ್:ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ವಿತರಣೆಗೆ ಉಂಟಾಗಿದ್ದ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಿದ್ದು, ಕಾರ್ಡ್ ವಿತರಣೆ ಮಾಡಲಾಗುತ್ತಿದೆ. ಈ ಯೋಜನೆಯಲ್ಲಿ ಕಳೆದ ಒಂದು ವರ್ಷದಲ್ಲಿ 5 ಲಕ್ಷ ಶಸ್ತ್ರ ಚಿಕಿತ್ಸೆ ಮಾಡಿದ್ದು, ₹1 ಸಾವಿರ ಕೋಟಿ ಹಣ ನೀಡಲಾಗಿದೆಎಂದು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.