ADVERTISEMENT

ಸಾಮಾಜಿಕ ಕಾರ್ಯಕರ್ತ ಯೋಗೇಂದ್ರ ಯಾದವ್‌ಗೆ ‘ಲೋಹಿಯಾ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2025, 15:43 IST
Last Updated 14 ಮಾರ್ಚ್ 2025, 15:43 IST
ಯೋಗೇಂದ್ರ ಯಾದವ್
ಯೋಗೇಂದ್ರ ಯಾದವ್   

ಬೆಂಗಳೂರು: ಭಾರತ ಯಾತ್ರಾ ಕೇಂದ್ರ ನೀಡುವ ‘ಡಾ. ರಾಮಮನೋಹರ ಲೋಹಿಯಾ ಪ್ರಶಸ್ತಿ’ಗೆ ಸಾಮಾಜಿಕ ಕಾರ್ಯಕರ್ತ ಹಾಗೂ ಅಂಕಣಕಾರ ಯೋಗೇಂದ್ರ ಯಾದವ್ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿ ₹25 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. ಬಿ.ಆರ್. ಪಾಟೀಲ ಮತ್ತು ಬಿ.ಎಲ್. ಶಂಕರ್ ಅವರಿದ್ದ ಸಮಿತಿ ಈ ಆಯ್ಕೆ ಮಾಡಿದೆ. ಕೇಂದ್ರವು ಇದೇ 23ರ ಸಂಜೆ 4 ಗಂಟೆಗೆ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಕೇಂದ್ರದ ಪ್ರಧಾನ ಕಾರ್ಯದರ್ಶಿ ಕೆ.ವಿ. ನಾಗರಾಜಮೂರ್ತಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.