ADVERTISEMENT

ಸಾಮಾಜಿಕ ಪಿಡುಗುಗಳನ್ನು ತಡೆಗಟ್ಟಿ: ಎಚ್‌. ಶಶಿಧರ್ ಶೆಟ್ಟಿ

​ಪ್ರಜಾವಾಣಿ ವಾರ್ತೆ
Published 20 ಜನವರಿ 2026, 15:51 IST
Last Updated 20 ಜನವರಿ 2026, 15:51 IST
ವಿಚಾರಸಂಕಿರಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್‌. ಶಶಿಧರ ಶೆಟ್ಟಿ ಹಾಗೂ ವಕೀಲ ವಿನಯ್‌ ಶ್ರೀನಿವಾಸ್‌ ಚರ್ಚೆ ನಡೆಸಿದರು. ವಕೀಲರಾದ ಸುಮಿತ್ರಾ ಆಚಾರ್ಯ, ಡೀಡ್ಸ್ ನಿರ್ದೇಶಕಿ ಮರ್ಲಿನ್‌ ಮಾರ್ಟಿಸ್‌ ಉಪಸ್ಥಿತರಿದ್ದರು
ಪ್ರಜಾವಾಣಿ ಚಿತ್ರ
ವಿಚಾರಸಂಕಿರಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್‌. ಶಶಿಧರ ಶೆಟ್ಟಿ ಹಾಗೂ ವಕೀಲ ವಿನಯ್‌ ಶ್ರೀನಿವಾಸ್‌ ಚರ್ಚೆ ನಡೆಸಿದರು. ವಕೀಲರಾದ ಸುಮಿತ್ರಾ ಆಚಾರ್ಯ, ಡೀಡ್ಸ್ ನಿರ್ದೇಶಕಿ ಮರ್ಲಿನ್‌ ಮಾರ್ಟಿಸ್‌ ಉಪಸ್ಥಿತರಿದ್ದರು ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಸಮಾಜದಲ್ಲಿ ಮಹಿಳೆಯರು, ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ, ಹಿಂಸೆ, ವರದಕ್ಷಿಣೆ ಕಿರುಕುಳ, ಬಾಲ್ಯ ವಿವಾಹದಂತಹ ಸಾಮಾಜಿಕ ಪಿಡುಗುಗಳನ್ನು ತಡೆಗಟ್ಟಿ, ಜಾಗೃತಿ ಮೂಡಿಸಬೇಕು’ ಎಂದು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್‌. ಶಶಿಧರ್ ಶೆಟ್ಟಿ ಸಲಹೆ ನೀಡಿದರು. 

ಡೆವಲಪ್‌ಮೆಂಟ್ ಎಜುಕೇಷನ್ ಸರ್ವಿಸ್‌(ಡೀಡ್ಸ್), ಕಾನೂನು ಸೇವಾ ಪ್ರಾಧಿಕಾರ ಹಾಗೂ ಪ್ಯಾರಾ ಲೀಗಲ್‌ ಫೆಸಿಲಿಟರ್ಸ್‌ ಕಲೆಕ್ಟಿವ್‌ ಸಹಯೋಗದಲ್ಲಿ ಮಂಗಳವಾರ ನಡೆದ ಅರೆಕಾಲಿಕ ಕಾನೂನು ಸ್ವಯಂಸೇವಕರಿಗೆ ಉಚಿತ ಕಾನೂನು ಸೇವೆಗಳ ಕುರಿತ ವಿಚಾರಸಂಕಿರಣದಲ್ಲಿ ಅವರು ಮಾತನಾಡಿದರು. 

‘ಮಹಿಳೆಯರು ಹಾಗೂ ಮಕ್ಕಳ ಕಳ್ಳಸಾಗಣೆ ಪ್ರಕರಣಗಳು ಹೆಚ್ಚುತ್ತಿವೆ. ಬಾಲಕಾರ್ಮಿಕ ಹಾಗೂ ದೇವದಾಸಿ ಪದ್ಧತಿಯ ಕುರಿತು ಸಮಾಜದಲ್ಲಿ ಅರಿವು ಮೂಡಿಸಬೇಕು. ಇವರಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸಬೇಕು. ಇತ್ತೀಚೆಗೆ ಪೋಕ್ಸೊ ಹಾಗೂ ಬಾಲ ಗರ್ಭಿಣಿಯರ ಪ್ರಕರಣಗಳು ಹೆಚ್ಚುತ್ತಿದ್ದು, ಇವುಗಳನ್ನು ನಿಯಂತ್ರಿಸಬೇಕು. ಈ ಬಗ್ಗೆ ರಾಜ್ಯದಾದ್ಯಂತ ಶಾಲಾ–ಕಾಲೇಜುಗಳಲ್ಲಿ ಜಾಗೃತಿ ಮೂಡಿಸಬೇಕು. ಕಾನೂನು ಸೇವಾ ಪ್ರಾಧಿಕಾರದ ಸಹಾಯವನ್ನು ಪಡೆದುಕೊಳ್ಳಬೇಕು’ ಎಂದರು.

ADVERTISEMENT

‘ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸುವವರು ಗ್ರಾಮೀಣ ಭಾಗದಲ್ಲಿ ಕಾನೂನು ಹಾಗೂ ಕಾಯ್ದೆಗಳ ಕುರಿತು ಜಾಗೃತಿ ಮೂಡಿಸಬೇಕು. ಅಂಗವಿಕಲರು, ವೃದ್ಧರು ಹಾಗೂ ಸಂಚಾರಕ್ಕೆ ಸಂಬಂಧಿಸಿದ ಕಾಯ್ದೆ–ಕಾನೂನುಗಳ ಕುರಿತು ತಿಳಿದುಕೊಳ್ಳಬೇಕು’ ಎಂದು ಸಲಹೆ ನೀಡಿದರು.  

ವಕೀಲ ವಿನಯ್‌ ಶ್ರೀನಿವಾಸ್‌, ಸುಮಿತ್ರಾ ಆಚಾರ್ಯ, ಮರ್ಲಿನ್‌ ಮಾರ್ಟಿಸ್‌ ಉಪಸ್ಥಿತರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.