ADVERTISEMENT

ಡಯಾಲಿಸಿಸ್‌ ಘಟಕ ಈಗ ಆರೈಕೆ ಕೇಂದ್ರ: ವಸತಿ ಸಚಿವ ವಿ.ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 29 ಮೇ 2021, 21:04 IST
Last Updated 29 ಮೇ 2021, 21:04 IST
ನಿರ್ಮಾಣ ಹಂತದಲ್ಲಿರುವ ಕೋವಿಡ್ ಆರೈಕೆ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿದ ಸಚಿವ ವಿ. ಸೋಮಣ್ಣ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದರು
ನಿರ್ಮಾಣ ಹಂತದಲ್ಲಿರುವ ಕೋವಿಡ್ ಆರೈಕೆ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿದ ಸಚಿವ ವಿ. ಸೋಮಣ್ಣ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದರು   

ಬೆಂಗಳೂರು: ‘ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಮಾರುತಿ ಮಂದಿರ ವಾರ್ಡ್‌ನಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಡಯಾಲಿಸಿಸ್‌ ಘಟಕವನ್ನು ಕೋವಿಡ್‌ ಆರೈಕೆ ಕೇಂದ್ರವನ್ನಾಗಿ ಪರಿವರ್ತಿಸಲಾಗುತ್ತಿದೆ’ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.

ಕ್ಷೇತ್ರದ ಶಾಸಕರೂ ಆಗಿರುವ ಅವರು ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.

ಬಳಿಕ ಮಾತನಾಡಿ ‘ಈ ಕೇಂದ್ರದಲ್ಲಿ ಸಾಮಾನ್ಯ ಹಾಸಿಗೆ, ಆಮ್ಲಜನಕ ಪೂರೈಕೆ ಹಾಸಿಗೆ ಹಾಗೂ ತೀವ್ರ ನಿಗಾ ಘಟಕಗಳ (ಐಸಿಯು) ಸೌಲಭ್ಯಗಳಿರುವ ಹಾಸಿಗೆಗಳು ಸೇರಿ ಒಟ್ಟು 60 ಹಾಸಿಗೆಗಳ ವ್ಯವಸ್ಥೆ ಮಾಡಲಾಗುತ್ತದೆ. ಮಕ್ಕಳಿಗಾಗಿ 10 ಹಾಸಿಗೆಗಳನ್ನು ಮೀಸಲಿಡಲಾಗಿದೆ. ಜೂನ್‌ 6ರಂದು ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಈ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ’ ಎಂದರು.

ADVERTISEMENT

ಗೋವಿಂದರಾಜನಗರ ಮಂಡಲ ಅಧ್ಯಕ್ಷ ವಿಶ್ವನಾಥ್ ಗೌಡ, ಮುಖಂಡ ವಾಗೀಶ ಹಾಗೂ ಬಿಬಿಎಂಪಿ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.