ಬೆಂಗಳೂರು: ‘ನಗರಕ್ಕೆ ಮಕ್ಕಳ ಕಳ್ಳರು ಬಂದಿದ್ದಾರೆ’ ಎಂಬುದಾಗಿ ವದಂತಿ ಹರಡುತ್ತಿದ್ದು, ಆ ಸಂಬಂಧ ಪೊಲೀಸ್ ಕಮಿಷನರ್ ಅಲೋಕ್‌ಕುಮಾರ್ ಶನಿವಾರ ಟ್ವೀಟ್ ಮಾಡಿದ್ದಾರೆ.
‘ಮಕ್ಕಳ ಅಪಹರಣ ಸಂಬಂಧ ಕೆಲವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಇಂಥ ಸುದ್ದಿಗಳನ್ನು ಸಾರ್ವಜನಿಕರು ನಂಬಬಾರದು. ಯಾವುದೇ ಸುದ್ದಿ ಇದ್ದರೂ ಫಾರ್ವರ್ಡ್ ಮಾಡುವ ಮುನ್ನ ಪರಿಶೀಲಿಸಬೇಕು’ ಎಂದು ಅಲೋಕ್‌ಕುಮಾರ್ ಹೇಳಿದ್ದಾರೆ.
‘ವದಂತಿಗಳನ್ನು ಹಬ್ಬಿಸಿ ಜನರಲ್ಲಿ ಆತಂಕವನ್ನುಂಟು ಮಾಡುವವರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.