ಮೈಸೂರು: ‘ಬಾಕಿ ಉಳಿದಿರುವ ಆರು ಸಚಿವ ಸ್ಥಾನಗಳನ್ನು ಸದ್ಯದಲ್ಲಿ ಭರ್ತಿ ಮಾಡಲಿದ್ದು, ಪ್ರಾದೇಶಿಕ ಅಸಮತೋಲನ ಹೋಗಲಾಡಿಸಲು ಪ್ರಯತ್ನಿಸಲಾಗುವುದು’ ಎಂದು ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಭಾನುವಾರ ಇಲ್ಲಿ ತಿಳಿಸಿದರು.
‘ಮುಖ್ಯಮಂತ್ರಿ ಯಡಿಯೂರಪ್ಪ ಕೊಟ್ಟ ಮಾತು ತಪ್ಪುವುದಿಲ್ಲ. ಹಳೇ ಮೈಸೂರು ಭಾಗ ಹಾಗೂ ಕರಾವಳಿ ಪ್ರದೇಶಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಮುಂದಿನ ದಿನಗಳಲ್ಲಿ ಎಚ್.ವಿಶ್ವನಾಥ್ ಹಾಗೂ ಎಂ.ಟಿ.ಬಿ.ನಾಗರಾಜ್ ಅವರಿಗೂ ಉತ್ತಮ ಸ್ಥಾನಮಾನ ಸಿಗಲಿದೆ’ ಎಂದು ನುಡಿದರು.
‘ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರದಲ್ಲಿ ಏನೋ ಗೊಂದಲ ಸೃಷ್ಟಿಯಾಗುತ್ತದೆ ಎಂದು ವಿರೋಧ ಪಕ್ಷದವರು ಹಗಲು ಕನಸು ಕಾಣುತ್ತಿದ್ದರು. ಆದರೆ, ಎಲ್ಲವೂ ಸುಸೂತ್ರವಾಗಿ ನಡೆದಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.