ADVERTISEMENT

ದಕ್ಷಿಣ ಆಫ್ರಿಕಾದ 22 ಮಂದಿ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2019, 20:38 IST
Last Updated 1 ಜೂನ್ 2019, 20:38 IST

ಬೆಂಗಳೂರು: ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿದ್ದ ದಕ್ಷಿಣ ಆಫ್ರಿಕಾದ 22 ಮಂದಿಯನ್ನು ಕೊತ್ತನೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವೀಸಾ ನಿಯಮ ಉಲ್ಲಂಘಿಸಿ ನೆಲೆಸಿರುವವರ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಕೊತ್ತನೂರು ಪ್ರದೇಶದಲ್ಲಿರುವ ವಿವಿಧ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

ವಶಕ್ಕೆ ಪಡೆದವರ ಪೈಕಿ ಇಬ್ಬರ ಮೇಲೆ ಈಗಾಗಲೇ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.