ADVERTISEMENT

ಎಸ್‌ಪಿ ಶೋಭಾ ಕಟಾವ್ಕರ್ ಅನುಮಾನಾಸ್ಪದ ಸಾವು; ಫ್ಲ್ಯಾಟ್‌ನಲ್ಲಿ ಮೃತದೇಹ ಪತ್ತೆ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2022, 16:16 IST
Last Updated 15 ಏಪ್ರಿಲ್ 2022, 16:16 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಎಸ್‌ಪಿ ಹುದ್ದೆಗೆ ಇತ್ತೀಚೆಗಷ್ಟೇ ಬಡ್ತಿ ಪಡೆದಿದ್ದ ಶೋಭಾ ಕಟಾವ್ಕರ್ ಅವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಅವರ ಮೃತದೇಹ ನಗರದಲ್ಲಿ ಶುಕ್ರವಾರ ಪತ್ತೆಯಾಗಿದೆ.

ಶೋಭಾ ಕಟಾವ್ಕರ್‌ ಅವರನ್ನು ಕಲಬುರ್ಗಿ ಪೊಲೀಸ್ ತರಬೇತಿ ಶಾಲೆಯ ಉಪ ಪ್ರಾಂಶುಪಾಲರಾಗಿ ವರ್ಗಾಯಿಸಲಾಗಿತ್ತು. ಸದ್ಯ ಅವರು ಬೆಂಗಳೂರು ವಿಶೇಷ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.

ಜೆ.ಪಿ.ನಗರದ 5ನೇ ಹಂತದಲ್ಲಿರುವ ಸುಮನಾ ಅಪಾರ್ಟ್‌ಮೆಂಟ್ ಸಮುಚ್ಚಯದ ಫ್ಲ್ಯಾಟ್‌ನಲ್ಲಿ ಶೋಭಾ ಅವರು ಕಟುಂಬ ಸಮೇತ ವಾಸವಿದ್ದರು. ಅದೇ ಫ್ಲ್ಯಾಟ್‌ನಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ADVERTISEMENT

ಪುಟ್ಟೇನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸಾವಿಗೆ ಕಾರಣ ಏನು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.