ADVERTISEMENT

ಸ್ಪಾ ಮೇಲೆ ಸಿಸಿಬಿ ದಾಳಿ: ಯುವತಿಯರ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 24 ಮೇ 2022, 15:43 IST
Last Updated 24 ಮೇ 2022, 15:43 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಮಾರತ್ತಹಳ್ಳಿ ಠಾಣೆ ವ್ಯಾಪ್ತಿಯ ವರ್ತೂರು ರಸ್ತೆಯಲ್ಲಿರುವ ‘ಝೆನ್ ಗ್ಲೋ ಸಲೂನ್ ಸ್ಪಾ ಆ್ಯಂಡ್ ವೆಲ್‌ನೆಸ್’ ಮಳಿಗೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.

‘ಮಳಿಗೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಬಂದಿತ್ತು. ದಾಳಿ ಮಾಡಿ, ಮೂವರು ಯುವತಿಯರನ್ನು ರಕ್ಷಿಸಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

‘ಗ್ರಾಹಕರನ್ನು ಮಳಿಗೆ ಕರೆಸಲಾಗುತ್ತಿತ್ತು. ಉದ್ಯೋಗ ಹಾಗೂ ಹಣದ ಆಮಿಷವೊಡ್ಡಿ ಯುವತಿಯರನ್ನು ವೇಶ್ಯಾವಾಟಿಕೆಗೆ ಬಳಸಿಕೊಳ್ಳಲಾಗುತ್ತಿತ್ತು.’

ADVERTISEMENT

‘ದಾಳಿ ವೇಳೆ ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ರಕ್ಷಿಸಲಾದ ಯುವತಿಯರಿಗೆ ಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.