
ಸಾಂದರ್ಭಿಕ ಚಿತ್ರ
ಬೆಂಗಳೂರು: ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಡಿ ದೊಮ್ಮಲೂರಿನ ಸ್ಪಾವೊಂದರ ಮೇಲೆ ಇಂದಿರಾನನಗರ ಪೊಲೀಸರು ದಾಳಿ ಮಾಡಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.
‘ದೊಮ್ಮಲೂರಿನ 2ನೇ ಹಂತದಲ್ಲಿರುವ ಸ್ಪಾನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಬಂದಿತ್ತು. ದಾಳಿ ಮಾಡಿ ಮಹಿಳೆಯರನ್ನು ರಕ್ಷಿಸಲಾಗಿದೆ. ಸ್ಪಾ ವ್ಯವಸ್ಥಾಪಕ ಮಣಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.
’ಸ್ಪಾ ಮಾಲೀಕ ಉಪ್ಪೇನ್ ರಾಟಿ ತಲೆಮರೆಸಿಕೊಂಡಿದ್ದಾರೆ. ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಉತ್ತರ ಪ್ರದೇಶ ಮತ್ತು ನಾಗಲ್ಯಾಂಡ್ ಮೂಲದ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಸ್ಪಾನಲ್ಲಿ ಬಾಡಿ ಟು ಬಾಡಿ ಮಸಾಜ್ ಹಾಗೂ ಇನ್ನಿತರ ಸೇವೆಗಳ ಹೆಸರಿನಲ್ಲಿ ಗ್ರಾಹಕರನ್ನು ಸೆಳೆಯಲಾಗುತ್ತಿತ್ತು. ಬಳಿಕ ಲೈಂಗಿಕ ಕ್ರಿಯೆಗೆ ಪುಸಲಾಯಿಸಿ ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದರು. ಸದ್ಯಕ್ಕೆ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.