ADVERTISEMENT

‘ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ಸ್ಪರ್ಧಾ ವಾಣಿ’

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2021, 21:56 IST
Last Updated 18 ಫೆಬ್ರುವರಿ 2021, 21:56 IST
ಪ್ರಜಾವಾಣಿಯು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗಾಗಿ ಹೊರ ತರುತ್ತಿರುವ ಸ್ಪರ್ಧಾ ವಾಣಿ ಸಂಚಿಕೆಯನ್ನು ಅತ್ತಿಬೆಲೆ ಸರ್ಕಲ್‌ ಇನ್‌ಸ್ಪೆಕ್ಟರ್‌ ಕೆ.ವಿಶ್ವನಾಥ್‌ ಬಿಡುಗಡೆಗೊಳಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ನರಸಿಂಹರಾಜು ಚಿತ್ರದಲ್ಲಿದ್ದಾರೆ

ಆನೇಕಲ್: ‘ವಿದ್ಯಾರ್ಥಿಗಳು ಪತ್ರಿಕೆ ಓದುವ ಹವ್ಯಾಸ ಮೈಗೂಡಿಸಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧೆ ಹೆಚ್ಚಾಗಿದೆ. ‘ಪ್ರಜಾವಾಣಿ’ ಹೊರತಂದಿರುವ ಸ್ಪರ್ಧಾ ವಾಣಿ ಸಂಚಿಕೆಯು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜುಗೊಳ್ಳಲು ಸಹಕಾರಿಯಾಗಿದೆ’ ಎಂದು ಅತ್ತಿಬೆಲೆ ಸರ್ಕಲ್‌ ಇನ್‌ಸ್ಪೆಕ್ಟರ್‌ ಕೆ.ವಿಶ್ವನಾಥ್‌ ತಿಳಿಸಿದರು.

ಅತ್ತಿಬೆಲೆಯ ಸೆಂಟ್‌ ಫಿಲೋಮಿನಾ ವಿದ್ಯಾ ಸಂಸ್ಥೆಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಅವರು‘ಪ್ರಜಾವಾಣಿ’ಯು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗಾಗಿ ಹೊರ ತರುತ್ತಿರುವ ಸ್ಪರ್ಧಾ ವಾಣಿ ಸಂಚಿಕೆ ಬಿಡುಗಡೆ ಮಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ನರಸಿಂಹರಾಜು, ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಜಿ.ಎನ್‌.ಸುರೇಶ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.