ಶಾಸಕ ಮುನಿರತ್ನ
ಬೆಂಗಳೂರು: ‘ಒತ್ತುವರಿ ಮಾಡಿ ಅಕ್ರಮವಾಗಿ ಶೆಡ್‌ಗಳನ್ನು ನಿರ್ಮಿಸಿದ್ದಾರೆ ಎಂಬ ಆರೋಪದಡಿ; ತೆರವು ಕಾರ್ಯಾಚರಣೆ ನಡೆಸುವ ವೇಳೆ ಮಾದಿಗ ಸಮುದಾಯದ 20 ವರ್ಷದ ಮಹಿಳೆಯ ಮೇಲೆ ಜಾತಿ ನಿಂದನೆಯ ದೌರ್ಜನ್ಯ ನಡೆಸಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಶಾಸಕ ಮುನಿರತ್ನ ಸೇರಿದಂತೆ ಏಳು ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ.
ಈ ಸಂಬಂಧ ಮುನಿರತ್ನ ಸೇರಿದಂತೆ ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.