ADVERTISEMENT

ಬೆಂಗಳೂರು–ಬೀದರ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು

​ಪ್ರಜಾವಾಣಿ ವಾರ್ತೆ
Published 13 ಜೂನ್ 2025, 15:29 IST
Last Updated 13 ಜೂನ್ 2025, 15:29 IST
<div class="paragraphs"><p>ರೈಲು</p></div>

ರೈಲು

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು ಬೆಂಗಳೂರು–ಬೀದರ್‌ ನಡುವೆ ಎರಡೂ ಕಡೆಯಿಂದ ತಲಾ ಐದು ಟ್ರಿಪ್‌ ವಿಶೇಷ ಎಕ್ಸ್‌ಪ್ರೆಸ್ ರೈಲು ಓಡಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ.

ADVERTISEMENT

ಸರ್‌ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್‌ಎಂವಿಟಿ)- ಬೀದರ್ ಎಕ್ಸ್‌ಪ್ರೆಸ್ ವಿಶೇಷ ರೈಲು ಜೂನ್ 15 ರಿಂದ 29ರವರೆಗೆ ಪ್ರತಿ ಶುಕ್ರವಾರ ಮತ್ತು ಭಾನುವಾರ ಸಂಚರಿಸಲಿದೆ. ಎಸ್‌ಎಂವಿಟಿಯಿಂದ ರಾತ್ರಿ 9.15ಕ್ಕೆ ಹೊರಟು ಮರುದಿನ ಬೆಳಿಗ್ಗೆ 11.30ಕ್ಕೆ ಬೀದರ್‌ಗೆ ತಲುಪಲಿದೆ. ಬೀದರ್‌ನಿಂದ ಬೆಂಗಳೂರಿಗೆ ಜೂನ್‌ 16ರಿಂದ 30ರವರೆಗೆ ಪ್ರತಿ ಶನಿವಾರ ಮತ್ತು ಸೋಮವಾರ ರೈಲು ಸಂಚರಿಸಲಿದೆ. ಮಧ್ಯಾಹ್ನ 1 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 4ಕ್ಕೆ ಬೆಂಗಳೂರಿಗೆ ತಲುಪಲಿದೆ. 

20 ಬೋಗಿಗಳನ್ನು ಹೊಂದಿರುವ ಈ ರೈಲು ಯಲಹಂಕ, ಹಿಂದೂಪುರ, ಧರ್ಮಾವರ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ವಾಡಿ, ಶಹಾಬಾದ್, ಕಲಬುರಗಿ ಮತ್ತು ಹುಮ್ನಾಬಾದ್ ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.