ADVERTISEMENT

ಬೆಂಗಳೂರು: ಚಾಮರಾಜಪೇಟೆ ಮೈದಾನಕ್ಕೆ ಭದ್ರತೆ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2022, 21:31 IST
Last Updated 12 ಆಗಸ್ಟ್ 2022, 21:31 IST
ಚಾಮರಾಜಪೇಟೆ ಮೈದಾನದಲ್ಲಿ ಪೊಲೀಸರು ಪಥಸಂಚಲನ ನಡೆಸಿದರು
ಚಾಮರಾಜಪೇಟೆ ಮೈದಾನದಲ್ಲಿ ಪೊಲೀಸರು ಪಥಸಂಚಲನ ನಡೆಸಿದರು   

ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲು ಕಂದಾಯ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಮೈದಾನ ಬಳಿ ಪೊಲೀಸರು ಶುಕ್ರವಾರರಿಂದಲೇ ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಮೈದಾನದ ಬಳಕೆ ಬಗ್ಗೆ ಪರ–ವಿರೋಧ ಚರ್ಚೆಗಳು ನಡೆಯುತ್ತಿದ್ದು, ಪೊಲೀಸರು ಈಗಾಗಲೇ ಶಾಂತಿ ಸಭೆಗಳನ್ನು ನಡೆಸಿದ್ದಾರೆ. ಆದರೆ, ಕೆಲ ಕಿಡಿಗೇಡಿಗಳು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆ ಇರುವುದಾಗಿ ಗುಪ್ತಚರ ಅಧಿಕಾರಿಗಳು ಎಚ್ಚರಿಸಿ
ದ್ದಾರೆ. ಇದೇ ಕಾರಣಕ್ಕೆ ಮೈದಾನ ಹಾಗೂ ಸುತ್ತಮುತ್ತ 600ಕ್ಕೂ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಹೆಚ್ಚುವರಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ ನೇತೃತ್ವದಲ್ಲಿ ಚಾಮರಾಜಪೇಟೆಯಲ್ಲಿ ಶುಕ್ರವಾರ ಪಥಸಂಚಲನ ನಡೆಸಿದ ಪೊಲೀಸರು, ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂಬುದಾಗಿ ಎಚ್ಚರಿಕೆ ರವಾನಿಸಿದರು.

ADVERTISEMENT

‘ಚಾಮರಾಜಪೇಟೆಯನ್ನು ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶವೆಂದು ಪರಿಗಣಿಸಲಾಗಿದೆ. ಕೆಎಸ್ಆರ್‌ಪಿ, ನಗರ ಸಶಸ್ತ್ರ ಮೀಸಲು ಪಡೆ ಸಿಬ್ಬಂದಿಯನ್ನು ಭದ್ರತೆಗೆ ಬಳಸಿಕೊಳ್ಳಲಾಗುತ್ತಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಧ್ವಜಾರೋಹಣ ನೆರವೇರಿಸಲು ಕ್ರಮ ಕೈಗೊಳ್ಳಲಾಗಿದ್ದು, ಆಹ್ವಾನ ಇದ್ದವರಿಗೆ ಮಾತ್ರ ಮೈದಾನದಲ್ಲಿ ಪ್ರವೇಶವಿರಲಿದೆ’ ಎಂದು ಸಂದೀಪ್ ಪಾಟೀಲ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.