ADVERTISEMENT

ಬೆಂಗಳೂರಿನಿಂದ ಬೆಳಗಾವಿ, ಎರ್ನಾಕುಲಂಗೆ ವಿಶೇಷ ರೈಲು

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2025, 15:55 IST
Last Updated 11 ಏಪ್ರಿಲ್ 2025, 15:55 IST
ರೈಲು (ಸಾಂಧರ್ಬಿಕ ಚಿತ್ರ)
ರೈಲು (ಸಾಂಧರ್ಬಿಕ ಚಿತ್ರ)   

ಬೆಂಗಳೂರು: ಬೆಳಗಾವಿ-ಬೆಂಗಳೂರು ಮತ್ತು ಬೆಂಗಳೂರು-ಎರ್ನಾಕುಲಂ ನಡುವೆ ಬೇಸಿಗೆ ವಿಶೇಷ ರೈಲುಗಳ ಟ್ರಿಪ್‌ ನಡೆಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ.

ಬೇಸಿಗೆ ರಜೆಯ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಏಪ್ರಿಲ್‌ 12ರಂದು ಬೆಳಿಗ್ಗೆ 4ಕ್ಕೆ ಬೆಳಗಾವಿಯಿಂದ ಹೊರಡುವ ರೈಲು ಮಧ್ಯಾಹ್ನ 3.30ಕ್ಕೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ. ಲೋಂಡಾ, ಅಳ್ನಾವರ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಎಸ್ಎಂಎಂ ಹಾವೇರಿ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಚಿಕ್ಕಬಾಣಾವರ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ADVERTISEMENT

ಎಸ್ಎಂವಿಟಿ ಬೆಂಗಳೂರಿನಿಂದ ಎರ್ನಾಕುಲಂಗೆ ಒಂದು ವಿಶೇಷ ಟ್ರಿಪ್‌ ಇರಲಿದೆ. ಏ.12ರಂದು ಸಂಜೆ 4:35ಕ್ಕೆ ಹೊರಡುವ ರೈಲು ಮರುದಿನ ಮುಂಜಾನೆ 3ಕ್ಕೆ ಎರ್ನಾಕುಲಂ ತಲುಪಲಿದೆ. ಏ.14ರಂದು ರಾತ್ರಿ 10ಕ್ಕೆ  ಎರ್ನಾಕುಲಂನಿಂದ ಹೊರಟು ಮರುದಿನ ಬೆಳಿಗ್ಗೆ 10.55ಕ್ಕೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ಈ ರೈಲು ಕೃಷ್ಣರಾಜಪುರ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರು, ಪೊದನೂರು, ಪಾಲಕ್ಕಾಡ್, ತ್ರಿಶೂರ್ ಮತ್ತು ಅಲುವಾ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.