ಬೆಂಗಳೂರು: ದಕ್ಷಿಣ ರೈಲ್ವೆಯು ಯಶವಂತಪುರ–ಮಂಗಳೂರು ಜಂಕ್ಷನ್ ಹಾಗೂ ಕಾರವಾರ ಮಾರ್ಗದಲ್ಲಿ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಒದಗಿಸಿದೆ. ಜನರು ಸಾಮಾನ್ಯ ದರದಲ್ಲಿ ಈ ರೈಲುಗಳಲ್ಲಿ ಪ್ರಯಾಣಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಮುಷ್ಕರದಿಂದ ಬಸ್ ಸೇವೆಯಲ್ಲಿ ವ್ಯತ್ಯಯವಾಗಿದೆ. ಈ ಸಮಯದಲ್ಲೇ ವಿಶೇಷ ರೈಲು ಸೇವೆ ಆರಂಭಿಸಿರುವುದರಿಂದ ಕರಾವಳಿ ಪ್ರದೇಶಗಳಿಗೆ ಪ್ರಯಾಣಿಸುವವರಿಗೆ ಅನುಕೂಲವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.