ರೈಲು
– ಪ್ರಜಾವಾಣಿ ಚಿತ್ರ
ಬೆಂಗಳೂರು: ಕ್ರಿಸ್‌ಮಸ್ ಪ್ರಯುಕ್ತ ಮಂಗಳೂರಿಗೆ ಎರಡು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಓಡಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ.
ಡಿ.23 ಮತ್ತು 27ರಂದು ರಾತ್ರಿ 11.55ಕ್ಕೆ ಯಶವಂತಪುರದಿಂದ ಹೊರಡಲಿದ್ದು, ಮರುದಿನ ಬೆಳಿಗ್ಗೆ 11.45ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಡಿ.24 ಮತ್ತು 28ರಂದು ಮಧ್ಯಾಹ್ನ 1ಕ್ಕೆ ಅದೇ ರೈಲು ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಹೊರಡಲಿದ್ದು, ಅಂದೇ ರಾತ್ರಿ 10.30ಕ್ಕೆ ಯಶವಂತಪುರ ತಲುಪಲಿದೆ.
ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ–ಪುತ್ತೂರು ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.