ADVERTISEMENT

ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಲಹೆ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2025, 18:31 IST
Last Updated 6 ನವೆಂಬರ್ 2025, 18:31 IST
ಬೀದರ್‌ನಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಕ್ರೀಡಾಜ್ಯೋತಿ ಸ್ವೀಕಾರದೊಂದಿಗೆ ನಗರದಲ್ಲಿ ಗುರುವಾರ ಆರಂಭವಾಯಿತು.
ಬೀದರ್‌ನಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಕ್ರೀಡಾಜ್ಯೋತಿ ಸ್ವೀಕಾರದೊಂದಿಗೆ ನಗರದಲ್ಲಿ ಗುರುವಾರ ಆರಂಭವಾಯಿತು.   

ಬೆಂಗಳೂರು: ಪ್ರತಿಯೊಬ್ಬರೂ ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಪ್ರಗತಿ ಸಾಧಿಸಬೇಕು ಎಂದು ಬೀದರ್‌ನಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಕೆ.ಸಿ ವೀರಣ್ಣ ಕರೆ ನೀಡಿದರು.

ಹೆಬ್ಬಾಳದ ಹೈನುಗಾರಿಕಾ ಮಹಾವಿದ್ಯಾಲಯ ಮೈದಾನದಲ್ಲಿ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ಪಶುವೈದ್ಯಕೀಯ ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ 19ನೇ ಅಂತರ ಮಹಾವಿದ್ಯಾಲಯಗಳ ಕ್ರೀಡಾಕೂಟ-2025 ಉದ್ಘಾಟಿಸಿ ಮಾತನಾಡಿದರು.

ಯುವ ಕ್ರೀಡಾಪಟುಗಳು ಶ್ರದ್ಧೆ, ಪರಿಶ್ರಮ ಮತ್ತು ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಇಂತಹ ಗುಣಗಳು ಕೇವಲ ಕ್ರೀಡೆಯಲ್ಲಿ ಮಾತ್ರವಲ್ಲದೆ, ದೈನಂದಿನ ಬದುಕಿಗೂ ಸಹಕಾರಿಯಾಗುತ್ತವೆ ಎಂದು ತಿಳಿಸಿದರು.

ADVERTISEMENT

ಬೆಂಗಳೂರು ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಎನ್.ಕೆ. ಶಿವಕುಮಾರ್ ಗೌಡ, ವಿಶ್ವವಿದ್ಯಾಲಯ ವ್ಯವಸ್ಥಾಪನ ಮಂಡಳಿ ಸದಸ್ಯರಾದ ಎಚ್‌.ಎಂ. ಜಯಪ್ರಕಾಶ್, ಬಸವರಾಜ ಪಿ. ಭತಮುರ್ಗೆ ಉಪಸ್ಥಿತರಿದ್ದರು.

ನ.9ರವರೆಗೆ ಕ್ರೀಡಾಕೂಟ ನಡೆಯಲಿದ್ದು, 6 ಪಶುವೈದ್ಯಕೀಯ ಕಾಲೇಜು, 2 ಡೈರಿ ವಿಜ್ಞಾನ ಕಾಲೇಜು ಮತ್ತು 1 ಮೀನುಗಾರಿಕಾ ವಿಜ್ಞಾನ ಕಾಲೇಜಿನಿಂದ 600 ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.