ADVERTISEMENT

ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ: ಹೈಕೋರ್ಟ್‌ಗೆ ಮಾಹಿತಿ

ಶ್ರೀ ಗುರು ರಾಘವೇಂದ್ರ ಬ್ಯಾಂಕ್ ವಂಚನೆ ಪ್ರಕರಣ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2020, 21:12 IST
Last Updated 4 ಸೆಪ್ಟೆಂಬರ್ 2020, 21:12 IST
ಶ್ರೀ ಗುರು ರಾಘವೇಂದ್ರ ಬ್ಯಾಂಕ್ (ಸಂಗ್ರಹ ಚಿತ್ರ)
ಶ್ರೀ ಗುರು ರಾಘವೇಂದ್ರ ಬ್ಯಾಂಕ್ (ಸಂಗ್ರಹ ಚಿತ್ರ)   

ಬೆಂಗಳೂರು: ‘ಶ್ರೀ ಗುರುರಾಘವೇಂದ್ರ ಬ್ಯಾಂಕ್ ವಂಚನೆ ಪ್ರಕರಣದಆರೋಪಿಗಳ ಪತ್ತೆಗೆ ಪೊಲೀಸ್ ಅಧಿಕಾರಿಗಳ ವಿಶೇಷ ತಂಡ ರಚನೆ ಮಾಡಲಾಗಿದೆ’ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ವಿಶೇಷ ತಂಡದಲ್ಲಿ ಇರುವ ಅಧಿಕಾರಿಗಳ ಹೆಸರು ಸೇರಿ ಹೆಚ್ಚಿನ ವಿವರ ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಸರ್ಕಾರಕ್ಕೆ ನಿರ್ದೇಶನ ನೀಡಿತು.

‘ಬ್ಯಾಂಕಿನ ಅಧ್ಯಕ್ಷ ಕೆ.ರಾಮಕೃಷ್ಣ ಹಾಗೂ ಅವರ ಮಗ ಸೇರಿ ಐವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಇಬ್ಬರು ವಿದೇಶದಲ್ಲಿದ್ದಾರೆ. ಇಬ್ಬರು ಸಾವಪ್ಪಿದ್ದು, ಅದರಲ್ಲಿ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಸರ್ಕಾರ ಮಾಹಿತಿ ನೀಡಿದೆ.

ADVERTISEMENT

ನ್ಯಾಯಾಲಯ ಕೇಳಿದ ಪ್ರಶ್ನೆಗಳಿಗೆ ಅನುಸರಣಾ ವರದಿ ಸಲ್ಲಿಸುವಂತೆ ವಿಶೇಷ ತಂಡಕ್ಕೆ ಪೀಠ ನಿರ್ದೇಶನ ನೀಡಿತು. ‘2018-19ರ ನಂತರ ಬ್ಯಾಂಕ್‌ನಲೆಕ್ಕಪರಿಶೋಧನೆ ನಡೆಸಲು ಯಾವುದೇ ಪ್ರಯತ್ನಗಳು ಏಕೆ ನಡೆದಿಲ್ಲ’ ಎಂದು ಪ್ರಶ್ನಿಸಿದ ಪೀಠ, ಅಗತ್ಯವಿದ್ದಲ್ಲಿ ರಾಜ್ಯ ಸರ್ಕಾರದ ವೆಚ್ಚದಲ್ಲಿ ಕೂಡಲೇ ಲೆಕ್ಕೆಪರಿಶೋಧನೆ ಮಾಡಿಸುವಂತೆತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.