ADVERTISEMENT

ಸಾಹಿತಿ ಕೆ.ಮರುಳಸಿದ್ದಪ್ಪಗೆ 2026ನೇ ಸಾಲಿನ ‘ಶ್ರೀ ಸಾಹಿತ್ಯ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2025, 15:59 IST
Last Updated 30 ಡಿಸೆಂಬರ್ 2025, 15:59 IST
ಮರುಳಸಿದ್ದಪ್ಪ
ಮರುಳಸಿದ್ದಪ್ಪ   

ಬೆಂಗಳೂರು: ಬಿ.ಎಂ.ಶ್ರೀ ಪ್ರತಿಷ್ಠಾನ ನೀಡುವ 2026ನೇ ಸಾಲಿನ ‘ಶ್ರೀ ಸಾಹಿತ್ಯ ಪ್ರಶಸ್ತಿ’ಗೆ ಸಾಹಿತಿ ಕೆ.ಮರುಳಸಿದ್ದಪ್ಪ ಆಯ್ಕೆಯಾಗಿದ್ದಾರೆ. 

ಕಮಲಿನಿ ಶಾ. ಬಾಲುರಾವ್ ಅವರು ಪ್ರತಿಷ್ಠಾನದಲ್ಲಿ ಈ ದತ್ತಿ ಪ್ರಶಸ್ತಿಯನ್ನು ಸ್ಥಾಪಿಸಿದ್ದಾರೆ. ದತ್ತಿ ಪ್ರಶಸ್ತಿಯು ₹ 1 ಲಕ್ಷ ನಗದು ಒಳಗೊಂಡಿದೆ. ಚನ್ನಪ್ಪ ಕಟ್ಟಿ, ಎಚ್. ದಂಡಪ್ಪ, ಎಚ್.ಎನ್. ಮುರಳೀಧರ ಅವರನ್ನು ಒಳಗೊಂಡ ಸಮಿತಿ ಈ ಆಯ್ಕೆ ಮಾಡಿದೆ.

ಜನವರಿ 4ರಂದು ಪ್ರತಿಷ್ಠಾನದ ಎಂ.ವಿ.ಸೀ. ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡುತ್ತಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಬೈರಮಂಗಲ ರಾಮೇಗೌಡ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.