
ಪ್ರಜಾವಾಣಿ ವಾರ್ತೆ
ಬೆಂಗಳೂರು: ಆಡುಗೋಡಿ ಪೊಲೀಸ್ ಠಾಣೆಯಲ್ಲಿ ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಅವರ ಮಾಜಿ ಪತಿ ಸುಧಾಕರ್ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
‘ಕೆಲವು ವರ್ಷಗಳ ಹಿಂದೆ ಸುಧಾಕರ್ ಮತ್ತು ಸ್ವರ್ಣಲತಾ ವಿಚ್ಛೇದನ ಪಡೆದುಕೊಂಡಿದ್ದರು. ಕೋರಮಂಗಲದ ತಮ್ಮ ಮನೆಗೆಸ್ವರ್ಣಲತಾ ನುಗ್ಗಿ ತಮ್ಮ ಮೇಲೆ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿ ಸುಧಾಕರ್ ದೂರು ನೀಡಿದ್ದಾರೆ. ಅತಿಕ್ರಮ ಪ್ರವೇಶದ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಜಾಮೀನು ಸಹಿತ ಪ್ರಕರಣವಾದದ್ದರಿಂದ ಬಂಧಿಸಿಲ್ಲ. ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲವು ತಿಂಗಳ ಹಿಂದೆ ಅಲಯನ್ಸ್ ವಿ.ವಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪ ಅಡಿ ಸ್ವರ್ಣಲತಾ ವಿರುದ್ಧ ಆನೇಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.