ADVERTISEMENT

ಅಗತ್ಯ ಬಿದ್ದರೆ ಎಸ್ಮಾ: ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2019, 20:17 IST
Last Updated 7 ನವೆಂಬರ್ 2019, 20:17 IST

ಬೆಂಗಳೂರು: ವೈದ್ಯರು ಅಗತ್ಯ ಸೇವೆಗಳ ವ್ಯಾಪ್ತಿಗೆ ಬರುವುದರಿಂದ ಅನಿವಾರ್ಯ ಎನಿಸಿದರೆ ಎಸ್ಮಾ ಜಾರಿ ಮಾಡುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಗಳ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಮುಷ್ಕರದ ಪರಿಸ್ಥಿತಿ ಅವಲೋಕಿಸಿ ಈ ಸಂಬಂಧ ಕ್ರಮ ತೆಗೆದುಕೊಳ್ಳುವುದಾಗಿ ಅವರು ಹೇಳಿದರು.

ಇನ್ನು ಮುಂದೆ ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ವೈದ್ಯರ ಮೇಲೆ ಯಾವುದೇ ಸಂಘಟನೆಯವರು ಹಲ್ಲೆ ನಡೆಸಿದರೂ ಸುಮ್ಮನೆ ಬಿಡಲು ಸಾಧ್ಯವಿಲ್ಲ. ವೈದ್ಯರು ಒತ್ತಡದಲ್ಲಿ ಕೆಲಸ ಮಾಡುತ್ತಾರೆ. ಇವರಿಗೆ ರಕ್ಷಣೆ ಒದಗಿಸುವುದು ಸರ್ಕಾರದ ಕರ್ತವ್ಯ. ಆಸ್ಪತ್ರೆಯಲ್ಲಿ ಕೆಲಸ ಮಾಡುವ ವೈದ್ಯರಿಗೆ ಪೊಲೀಸ್‌ ಭದ್ರತೆ ಕಲ್ಪಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಜತೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.