ADVERTISEMENT

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2: ವಿದ್ಯಾರ್ಥಿಗಳಿಗೆ ಪ್ರಯಾಣ ಉಚಿತ

​ಪ್ರಜಾವಾಣಿ ವಾರ್ತೆ
Published 29 ಮೇ 2024, 20:30 IST
Last Updated 29 ಮೇ 2024, 20:30 IST
<div class="paragraphs"><p>ಕೆಎಸ್‌ಆರ್‌ಟಿಸಿ ಬಸ್‌&nbsp;</p></div>

ಕೆಎಸ್‌ಆರ್‌ಟಿಸಿ ಬಸ್‌ 

   

ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ–2ರ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ನೀಡಲಾಗಿದೆ.

ADVERTISEMENT

ಜೂನ್‌ 14ರಿಂದ 22ರವರೆಗೆ ಪರೀಕ್ಷೆ ನಡೆಯುವ ದಿನಗಳಂದು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳುವ ಮತ್ತು ಅಲ್ಲಿಂದ ಹಿಂದಿರುಗುವ ವೇಳೆ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರಗಳನ್ನು ತೋರಿಸಿ ಪ್ರಯಾಣಿಸಬಹುದು.

ಕೆಎಸ್‌ಆರ್‌ಟಿಸಿಯ ನಗರ, ಹೊರವಲಯ, ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ ಈ ಸೌಲಭ್ಯ ಕಲ್ಪಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚುವರಿ ಟ್ರಿಪ್‌ಗಳ ಅಗತ್ಯ ಕಂಡು ಬಂದಲ್ಲಿ ಕಾರ್ಯಾಚರಣೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.