ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಉತ್ಸಾಹದಿಂದ ಬರುತ್ತಿರುವ ಮಕ್ಕಳು

ಕುಂದದ ಉತ್ಸಾಹ

​ಪ್ರಜಾವಾಣಿ ವಾರ್ತೆ
Published 25 ಜೂನ್ 2020, 3:37 IST
Last Updated 25 ಜೂನ್ 2020, 3:37 IST
ಚಾಮರಾಜನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿರುವ ಮಕ್ಕಳ ಥರ್ಮಲ್‌ ಸ್ಕ್ರೀನಿಂಗ್ ‌ನಡೆಸಲಾಯಿತು.
ಚಾಮರಾಜನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿರುವ ಮಕ್ಕಳ ಥರ್ಮಲ್‌ ಸ್ಕ್ರೀನಿಂಗ್ ‌ನಡೆಸಲಾಯಿತು.   

ಬೆಂಗಳೂರು: ರಾಜ್ಯದ ವಿವಿಧೆಡೆ ಗುರುವಾರ ಮುಂಜಾನೆ 10ನೇ ತರಗತಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಉತ್ಸಾಹದಿಂದ ಪರೀಕ್ಷಾ ಕೇಂದ್ರಗಳಿಗೆ ಬಂದರು.

ಕೊರೊನಾ ವೈರಸ್‌ ಸೋಂಕು ಹರಡುವುದನ್ನು ತಡೆಯಲು ಲಾಕ್‌ಡೌನ್ ಘೋ‍ಷಿಸಿದ್ದ ಕಾರಣ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮುಂದೂಡಲಾಗಿತ್ತು.

ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 7.30ರಿಂದಲೇ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶಾವಕಾಶ ಕಲ್ಪಿಸಲಾಗಿದೆ.

ADVERTISEMENT

ಬಹುತೇಕ ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳಿಗೆ ಉಚಿತ ಫೇಸ್‌ಮಾಸ್ಕ್‌ ವಿತರಿಸಲಾಯಿತು. ಮಕ್ಕಳ ಆರೋಗ್ಯ ತಪಾಸಣೆ ನಡೆಸಿ ಒಳಗೆ ಕರೆದುಕೊಳ್ಳಲಾಯಿತು. ಸೋಂಕು ಲಕ್ಷಣವಿರುವ ಮಕ್ಕಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.