ADVERTISEMENT

ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆ ಫೆಬ್ರುವರಿ 23ರಿಂದ ಆರಂಭ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2023, 4:24 IST
Last Updated 3 ಫೆಬ್ರುವರಿ 2023, 4:24 IST
   

ಬೆಂಗಳೂರು: ರಾಜ್ಯದ ಎಲ್ಲ ಪ್ರೌಢ ಶಾಲೆಗಳಲ್ಲೂ ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಗಳನ್ನು ಫೆ.23ರಿಂದ ಮಾರ್ಚ್‌ 1ರವರೆಗೆ ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಫೆ.23ರಂದು ಪ್ರಥಮ ಭಾಷಾ ವಿಷಯಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌, ಸಂಸ್ಕೃತ ಎಲ್ಲವೂ 100 ಅಂಕಗಳು), 24ರಂದು ದ್ವಿತೀಯ ಭಾಷೆ ಇಂಗ್ಲಿಷ್‌, ಕನ್ನಡ (80 ಅಂಕಗಳು), 25ರಂದು ತೃತೀಯ ಭಾಷಾ ವಿಷಯಗಳು (80 ಅಂಕಗಳು), 27ರಂದು ಗಣಿತ, 28ರಂದು ವಿಜ್ಞಾನ, ಮಾರ್ಚ್‌ 1ರಂದು ಸಮಾಜ ವಿಜ್ಞಾನ (ತಲಾ 80 ಅಂಕಗಳು) ಪರೀಕ್ಷೆಗಳು ನಡೆಯಲಿವೆ.

ಎಲ್ಲ ಪರೀಕ್ಷೆಗಳನ್ನೂ ಪ್ರತಿದಿನ ಬೆಳಿಗ್ಗೆ 10.30ರಿಂದ 1.30ರವರೆಗೆ ನಡೆಸಬೇಕು. ಜೆಟಿಎಸ್‌ ಸೇರಿದಂತೆ ಪರ್ಯಾಯ ವಿಷಯಗಳಿಗೆ ಶಾಲಾ ಹಂತದದಲ್ಲೇ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿಕೊಂಡ,ಪರೀಕ್ಷೆ ಗಳನ್ನು ನಡೆಸಲು ಮುಖ್ಯ ಶಿಕ್ಷಕರು ಕ್ರಮ ಕೈಗೊಳ್ಳಬೇಕು ಎಂದು ಮಂಡಳಿ ನಿರ್ದೇಶಕರು ಸೂಚಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.