ನೆಲಮಂಗಲ: ಪಟ್ಟಣದ ವಿಶಾಲ್ ಶಾಲೆಯು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದಿದೆ.
ಒಟ್ಟು 37 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 10 ವಿದ್ಯಾರ್ಥಿಗಳು ಅತ್ಯುನ್ನತ, 22 ವಿದ್ಯಾರ್ಥಿಗಳು ಮೊದಲ ದರ್ಜೆ, ಐವರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಎನ್.ಎಸ್. ಸ್ಪಂದನ ಶೇ 98.24ರಷ್ಟು ಅಂಕ ಗಳಿಸಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಟಿ.ಕೆ. ನರಸೇಗೌಡ, ಮುಖ್ಯಶಿಕ್ಷಕ ಜಿ.ಚಿಕ್ಕರುದ್ರಪ್ಪ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.