ADVERTISEMENT

ಪರೀಕ್ಷಾ ಕೇಂದ್ರಗಳಿಗೆ ಬಿಗಿ ಭದ್ರತೆ

ಸ್ಮಾರ್ಟ್‌ ವಾಚ್‌ ಮತ್ತು ಮೊಬೈಲ್‌ಗೆ ನಿಷೇಧ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2019, 20:10 IST
Last Updated 18 ಮಾರ್ಚ್ 2019, 20:10 IST

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್‌ ಬಿಗಿ ಭದ್ರತೆ ಮತ್ತು ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲು ಇಡಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದ ಒಳಗೆ ಸ್ಮಾರ್ಟ್‌ ವಾಚ್‌ ಮತ್ತು ಮೊಬೈಲ್‌ಗಳನ್ನು ಒಯ್ಯವುದನ್ನು ನಿಷೇಧಿಸಲಾಗಿದೆ.

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ.ಸುಮಂಗಲಾ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಅಲ್ಲಿ ಯಾವುದೇ ಜೆರಾಕ್ಸ್‌ ಅಂಗಡಿಗಳಿದ್ದರೆ, ಮುಚ್ಚಲು ಕ್ರಮವಹಿಸಲಾಗಿದೆ ಎಂದು ಅವರು ತಿಳಿಸಿದರು.

ADVERTISEMENT

ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸ್ಥಾನಿಕ ಜಾಗೃತ ದಳ, ತಾಲ್ಲೂಕು ಮತ್ತು ಜಿಲ್ಲಾ ಹಂತಗಳಲ್ಲಿ ವಿಚಕ್ಷಣ ದಳಗಳು ಕಾರ್ಯ ನಿರ್ವಹಿಸುತ್ತವೆ.ಪ್ರಶ್ನೆ ಪತ್ರಿಕೆಗಳ ಸುರಕ್ಷತೆಗೆ ಪ್ರತಿ ಜಿಲ್ಲಾ ಖಜಾನೆಗಳಲ್ಲಿ ಸಿಸಿಟಿವಿ ಮೂಲಕ ನಿರಂತರ ವೀಕ್ಷಣೆಗೆ ಕ್ರಮ ವಹಿಸಲಾಗಿದೆ ಎಂದರು.

ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳು ಮತ್ತು ಚಟುವಟಿಕೆಗಳನ್ನು ಪೋಸ್ಟರ್‌ ಮೂಲಕ ಪ್ರಚುರಪಡಿಸಲಾಗಿದೆ ಎಂದರು.

ಏ. 10ರಿಂದ ಮೌಲ್ಯಮಾಪನ: ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಏ. 10 ರಿಂದ ಆರಂಭಿಸಲಾಗುವುದು. 34 ಶೈಕ್ಷಣಿಕ ಜಿಲ್ಲೆಗಳ 230 ಕೇಂದ್ರ ಗಳಲ್ಲಿ ಮೌಲ್ಯ ಮಾಪನ ನಡೆಯಲಿದೆ. ಬಳಿಕ ಅಂಕಗಳನ್ನು ಅಂತರ್ಜಾಲ ಆಧಾರಿತ ತಂತ್ರಾಂಶದ ನೆರವಿನೊಂದಿಗೆ ಮೌಲ್ಯಮಾಪನ ಕೇಂದ್ರಗಳಿಂದ ನೇರವಾಗಿ ಮಂಡಳಿ ಸರ್ವರ್‌ಗೆ ವರ್ಗಾ ಯಿಸಲಾಗುವುದು ಎಂದು ಹೇಳಿದರು.

ಫಲಿತಾಂಶವನ್ನು ವಿದ್ಯಾರ್ಥಿಗಳು ಮತ್ತು ಪೋಷಕರ ಮೊಬೈಲ್‌ಗೆ ಎಸ್‌ಎಂಎಸ್ ಮೂಲಕ ನೀಡಲಾ ಗುವುದು. ಶಾಲಾ ಫಲಿತಾಂಶ ಶಾಲಾ ಲಾಗಿನ್‌ಗೆ ನೀಡಲಾಗುವುದು ಎಂದರು

ಬೆಂಗಳೂರು ನಗರದಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಪ್ರಯಾಣದ ಸೌಲಭ್ಯವಿದೆ ಎಂದು ಅವರು ಹೇಳಿದರು.

**

ವಿದ್ಯಾರ್ಥಿಗಳು, ಪರೀಕ್ಷಾ ಕೇಂದ್ರಗಳು

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು 8,41,666

ಬಾಲಕರು 4,47,864

ಬಾಲಕಿಯರು 3,93,802

––––––

ಪರೀಕ್ಷಾ ಕೇಂದ್ರಗಳು ಒಟ್ಟು 2847

ಕ್ಲಸ್ಟರ್‌ರಹಿತ 1057

ಕ್ಲಸ್ಟರ್‌ ಕೇಂದ್ರಗಳು 1698

ಖಾಸಗಿ ಅಭ್ಯರ್ಥಿಗಳ ಪರೀಕ್ಷಾ ಕೇಂದ್ರಗಳ 92

ಸೂಕ್ಷ್ಮ ಪರೀಕ್ಷಾ ಕೇಂದ್ರಗಳು 46

ಅತಿಸೂಕ್ಷ್ಮ ಪರೀಕ್ಷಾ ಕೇಂದ್ರಗಳು 7

(ಕಲಬುರ್ಗಿ ಜಿಲ್ಲೆಯಲ್ಲಿ ಅತಿ ಹೆಚ್ಚು(22) ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಕೇಂದ್ರಗಳಿವೆ)

–––––––

* ಪರೀಕ್ಷಾ ಸಮಯ ಬೆಳಿಗ್ಗೆ 9.30 ರಿಂದ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.