ADVERTISEMENT

ಬ್ರಿಗೇಡ್‌ ಮೆಡೋಸ್‌: ಸೇಂಟ್ ಜಾನ್ಸ್ ಆಸ್ಪತ್ರೆ ಆರಂಭ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2024, 22:07 IST
Last Updated 10 ಸೆಪ್ಟೆಂಬರ್ 2024, 22:07 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಕನಕಪುರ ರಸ್ತೆಯ ಬ್ರಿಗೇಡ್‌ ಮೆಡೋಸ್‌ ಅಪಾರ್ಟ್‌ಮೆಂಟ್‌ನಲ್ಲಿ ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜಿನ 108 ಹಾಸಿಗೆಗಳ ಅತ್ಯಾಧುನಿಕ ಆಸ್ಪತ್ರೆ ಆರಂಭಗೊಂಡಿದೆ.

ಸೇಂಟ್‌ ಜಾನ್ಸ್‌ ನ್ಯಾಷನಲ್‌ ಅಕಾಡೆಮಿ ಆಫ್ ಹೆಲ್ತ್‌ ಸೈನ್ಸಸ್, ಬ್ರಿಗೇಡ್‌ ಫೌಂಡೇಶನ್‌ ಸಹಯೋಗದಲ್ಲಿ ಸ್ಥಾಪಿಸಿರುವ ಆಸ್ಪತ್ರೆಯನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಂಗಳವಾರ ಉದ್ಘಾಟಿಸಿದರು.

ADVERTISEMENT

ನಂತರ ಮಾತನಾಡಿದ ಅವರು, ‘ಅತ್ಯುತ್ತಮ ನುರಿತ ವೈದ್ಯರು, ರೋಗ ಪತ್ತೆ ಹಚ್ಚುವ ಆಧುನಿಕ ಯಂತ್ರೋಪಕರಣಗಳನ್ನು ಒಳಗೊಂಡಿರುವ ಆಸ್ಪತ್ರೆಯಲ್ಲಿ ಬೆಂಗಳೂರು ದಕ್ಷಿಣ ಹಾಗೂ ಗ್ರಾಮೀಣ ಜನರಿಗೆ ಕೈಗೆಟಕುವ ದರದಲ್ಲಿ ಅತ್ಯುತ್ತಮ ಆರೋಗ್ಯ ಸೇವೆ ಲಭಿಸಲಿದೆ’ ಎಂದರು.

ಸೇಂಟ್‌ ಜಾನ್ಸ್‌ ನಿರ್ದೇಶಕ ಆರ್‌. ಜೇಸುದಾಸ್‌, ‘ಕಡಿಮೆ ವೆಚ್ಚದಲ್ಲಿ ಆರೋಗ್ಯ ಸೇವೆ ಒದಗಿಸಲು ಸಂಸ್ಥೆ ಬದ್ಧವಾಗಿದೆ. ಲಾಭಕ್ಕಿಂತ ಸೇವೆಯ ಧ್ಯೇಯದ ಆಧಾರದಲ್ಲಿ ಆರೋಗ್ಯ ಸೇವೆ ಒದಗಿಸುತ್ತಿದ್ದೇವೆ. ಇಂತಹ ಜನಪರ ಕಾರ್ಯಕ್ಕೆ ಬ್ರಿಗೇಡ್‌ ಸಂಸ್ಥೆ ಕೈಜೋಡಿಸಿರುವುದು ಹೆಮ್ಮೆಯ ಸಂಗತಿ’ ಎಂದು ಹೇಳಿದರು.

ಬ್ರಿಗೇಡ್‌ ಫೌಂಡೇಶನ್‌ ಕಾರ್ಯನಿರ್ವಾಹಕ ಅಧ್ಯಕ್ಷ ಎಂ.ಆರ್. ಜೈಶಂಕರ್, ‘ಕೋವಿಡ್‌ ಸಮಯದಲ್ಲಿ 10 ಹಾಸಿಗೆಯ ಆಸ್ಪತ್ರೆ ತೆರೆಯವ ಮೂಲಕ ಎಂಟು ಸಾವಿರ ಜನರ ಸಂಕಷ್ಟಕ್ಕೆ ಸ್ಪಂದಿಸಲಾಗಿತ್ತು. ಈಗ ಅದೇ ಜಾಗದಲ್ಲಿ 108 ಹಾಸಿಗೆಗಳ ಆಸ್ಪತ್ರೆ ತಲೆ ಎತ್ತಿದೆ. ಸ್ಥಳೀಯರಿಗೆ ಸಾಕಷ್ಟು ಪ್ರಯೋಜನವಾಗಲಿದೆ’ ಎಂದರು.

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಶಾಸಕ ಎಸ್‌.ಟಿ. ಸೋಮಶೇಖರ್‌ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.