ADVERTISEMENT

ಗ್ರಾಮ ಪಂಚಾಯಿತಿ ಆದಾಯ ಮೂಲ ಹೆಚ್ಚಿಸಿ: ಶಾಸಕ ಎಸ್.ಟಿ.ಸೋಮಶೇಖರ್ ಸಲಹೆ

​ಪ್ರಜಾವಾಣಿ ವಾರ್ತೆ
Published 18 ಜನವರಿ 2019, 18:52 IST
Last Updated 18 ಜನವರಿ 2019, 18:52 IST

ಬೆಂಗಳೂರು: ‘ವರಮಾನ ಹೆಚ್ಚಿಸಿಕೊಳ್ಳಲು ಗ್ರಾಮ ಪಂಚಾಯಿತಿಗಳು ವಾಣಿಜ್ಯ ಮಳಿಗೆ, ಅಂಗಡಿ, ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸಿಕೊಳ್ಳಬೇಕು’ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಶಾಸಕ ಎಸ್.ಟಿ.ಸೋಮಶೇಖರ್ ಸಲಹೆ ನೀಡಿದರು.

ಸೂಲಿಕೆರೆ ಗ್ರಾಮ ಪಂಚಾಯಿತಿ ವತಿಯಿಂದ ಕೊಮ್ಮಘಟ್ಟದಲ್ಲಿ ನಿರ್ಮಿಸಿರುವ ವಾಣಿಜ್ಯ ಮಳಿಗೆ, ಪ್ರಯಾಣಿಕರ ತಂಗುದಾಣ ಉದ್ಘಾಟಿಸಿ ಅವರು ಮಾತನಾಡಿದರು.

‘ಸರ್ಕಾರದ ಅನುದಾನದ ಜೊತೆಗೆ, ವಿವಿಧ ಮೂಲಗಳಿಂದ ಆದಾಯ ಬರುವಂತೆ ಮುತುವರ್ಜಿ ವಹಿಸಿ’ ಎಂದು ಕಿವಿಮಾತು ಹೇಳಿದರು.

ADVERTISEMENT

ಬೆಂಗಳೂರು ದಕ್ಷಿಣ ತಾಲ್ಲೂಕು ಪಂಚಾಯಿತಿ ಸದಸ್ಯೆ ವಿ.ಬಿ.ಶೋಭಾ ತಿಮ್ಮೇಗೌಡ, ‘ಎಸ್.ಟಿ.ಸೋಮಶೇಖರ್ ಅವರು ಹತ್ತಾರು ಕೋಟಿ ಹಣ ಬಿಡುಗಡೆ ಮಾಡಿಸಿ, ಸೂಲಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಮೂಲಸೌಕರ್ಯ ನೀಡಿದ್ದಾರೆ’ ಶ್ಲಾಘಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.