ADVERTISEMENT

ಬೆಂಗಳೂರು ಕಾಲ್ತುಳಿತ ಪ್ರಕರಣ: ವಿಮಾನ ನಿಲ್ದಾಣಕ್ಕೆ ಹೋದವರು ಯಾರು?

​ಪ್ರಜಾವಾಣಿ ವಾರ್ತೆ
Published 19 ಜುಲೈ 2025, 0:15 IST
Last Updated 19 ಜುಲೈ 2025, 0:15 IST
<div class="paragraphs"><p>ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಿಕ್ಕಿರಿದು ಸೇರಿದ್ದ ಆರ್‌ಸಿಬಿ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದರು</p></div><div class="paragraphs"><p>&nbsp;</p></div>

ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಿಕ್ಕಿರಿದು ಸೇರಿದ್ದ ಆರ್‌ಸಿಬಿ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದರು

 

   

ಪ್ರಜಾವಾಣಿ ಚಿತ್ರ: ಪುಷ್ಕರ್‌ ವಿ

ADVERTISEMENT

ಬೆಂಗಳೂರು: ‘ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟ ಘಟನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪೊಲೀಸರು ಆರ್‌ಸಿಬಿ ಸೇವಕರಂತೆ ವರ್ತಿಸಿದ್ದಾರೆ ಎಂಬ ರಾಜ್ಯ ಸರ್ಕಾರದ ವಾದ ದುರದೃಷ್ಟಕರ’ ಎಂದು ಹೆಚ್ಚುವರಿ ಪೊಲೀಸ್‌ ಆಯುಕ್ತ ವಿಕಾಸ್‌ ಕುಮಾರ್‌ ವಿಕಾಸ್ ಪರ ವಕೀಲರು ಹೈಕೋರ್ಟ್‌ಗೆ ಅರುಹಿದರು.

ಪೊಲೀಸ್‌ ಅಧಿಕಾರಿಗಳ ಅಮಾನತು ಆದೇಶವನ್ನು ರದ್ದುಪಡಿಸಿರುವ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಆದೇಶ ಪ್ರಶ್ನಿಸಿ ವಿಕಾಸ್‌ ಕುಮಾರ್ ವಿಕಾಸ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ಜಿ.ಪಂಡಿತ್‌ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದಡಿ ವಿಕಾಸ್‌ ಕುಮಾರ್‌ ವಿಕಾಸ್‌ ಅವರನ್ನು ಅಮಾನತುಗೊಳಿಸಿದ ಆದೇಶವನ್ನು ರದ್ದುಪಡಿಸಿರುವ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ಜಿ.ಪಂಡಿತ್‌ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಧ್ಯಾನ್‌ ಚಿನ್ನಪ್ಪ, ‘ಈ ಪ್ರಕರಣದಲ್ಲಿ ಸರ್ಕಾರ ಯಾವುದೇ ದಾಖಲೆಗಳಿಲ್ಲದೇ ಪೊಲೀಸರನ್ನು ಸರ್ಕಾರ ಅಮಾನತುಪಡಿಸಿದೆ. ತನಿಖಾ ವರದಿ ಬರುವ ಮುನ್ನವೇ ತನಗೆ ಮುಜುಗರವಾಗಿದೆ ಎಂದು ಯಾರನ್ನೋ ಅಮಾನತು ಮಾಡುವುದು ಸಲ್ಲದು. ಅಷ್ಟಕ್ಕೂ, ಆರ್‌ಸಿಬಿ ತಂಡವನ್ನು ಸ್ವಾಗತಿಸಲು ಯಾರು ವಿಮಾನ ನಿಲ್ದಾಣಕ್ಕೆ ಹೋಗಿದ್ದರು ಎಂಬ ಸಂಗತಿ ಎಲ್ಲರಿಗೂ ತಿಳಿದಿದೆ’ ಎಂದು ಬಲವಾಗಿ ಕುಟುಕಿದರು.

‘ಪೊಲೀಸರು ತಮ್ಮ ಕರ್ತವ್ಯವನ್ನು ಕಟ್ಟುನಿಟ್ಟಾಗಿ ನಿರ್ವಹಿಸಿದರೂ ತಪ್ಪು. ನಿರ್ವಹಿಸಿದೇ ಇದ್ದರೂ ತಪ್ಪು ಎಂಬುದಕ್ಕೆ ಇದೊಂದು ಸ್ಪಷ್ಟ ನಿದರ್ಶನವಾಗಿದೆ. ನ್ಯಾಯಾಲಯದ ಮುಂದೆ ಎಲ್ಲವೂ ಸರಿಯಾಗಿದೆ ಎಂಬುದನ್ನು ತೋರಿಸಲು ದಾಖಲೆಗಳ ಅನುಪಸ್ಥಿತಿಯಲ್ಲಿಯೂ ವಿಕಾಸ್‌ ಕುಮಾರ್‌ ವಿಕಾಸ್‌ ಅವರನ್ನು ಸರ್ಕಾರ ನಿಂದಿಸುತ್ತಿದೆ’ ಎಂದು ಅವರು ಆಕ್ಷೇಪಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.