ADVERTISEMENT

ಅಗ್ರಮಾನ್ಯ ವಿಜ್ಞಾನಿಗಳ ಪಟ್ಟಿಯಲ್ಲಿ ನಾಗೇಂದ್ರ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2020, 22:36 IST
Last Updated 8 ನವೆಂಬರ್ 2020, 22:36 IST
ಎಚ್.ಆರ್. ನಾಗೇಂದ್ರ
ಎಚ್.ಆರ್. ನಾಗೇಂದ್ರ   

ಬೆಂಗಳೂರು: ಅಮೆರಿಕದ ಸ್ಟಾನ್‌ಫೋರ್ಡ್‌ ವಿಶ್ವವಿದ್ಯಾಲಯವು ಹೊರತಂದಿರುವ ವಿಶ್ವದ ಅಗ್ರಮಾನ್ಯ ಹಾಗೂ ಪ್ರತಿಷ್ಠಿತ ವಿಜ್ಞಾನಿಗಳ ಪಟ್ಟಿಯಲ್ಲಿನಗರದ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನದ ಕುಲಪತಿ ಡಾ.ಎಚ್.ಆರ್. ನಾಗೇಂದ್ರ ಸ್ಥಾನ ಪಡೆದಿದ್ದಾರೆ.

ಪೂರಕ ಹಾಗೂ ಪರ್ಯಾಯ ಆರೋಗ್ಯ ವಿಜ್ಞಾನ ಕ್ಷೇತ್ರದಲ್ಲಿನ ಅವರ ಸಾಧನೆ ಗುರುತಿಸಲಾಗಿದ್ದು, ಪಟ್ಟಿಯಲ್ಲಿ 158ನೇ ಸ್ಥಾನದಲ್ಲಿದ್ದಾರೆ. ವಿಶ್ವಮಟ್ಟದಲ್ಲಿ ಯೋಗ ಹಾಗೂ ಭಾರತೀಯ ವೈದ್ಯ ಪದ್ಧತಿಯ ಪ್ರಚಾರಕರಾಗಿ, ಸಂಶೋಧಕರಾಗಿ ನಾಗೇಂದ್ರ ಅವರು ಕಾರ್ಯತತ್ಪರರಾಗಿದ್ದಾರೆ.

ಈವರೆಗೆ 125 ಸಂಶೋಧನಾ ಲೇಖನಗಳನ್ನು ವಿಶ್ವದ ಪ್ರತಿಷ್ಠಿತ ಸಂಶೋಧನಾ ಪತ್ರಿಕೆಗಳಲ್ಲಿ ಪ್ರಕಟಿಸಿದ್ದಾರೆ. ಹಾರ್ವರ್ಡ್‌ ವಿಶ್ವವಿದ್ಯಾಲಯ, ಇಂಪಿರಿಯಲ್ ಕಾಲೇಜು, ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಶೈಕ್ಷಣಿಕ ಸೇವೆ ಸಲ್ಲಿಸಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.