
ಪ್ರಜಾವಾಣಿ ವಾರ್ತೆ
ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಆರ್.ಅಂಬಿಕಾಪತಿ ಅವರು ಸೋಮವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು.
ಮೃತರಿಗೆ ಪತ್ನಿ, ಪಾಲಿಕೆ ಮಾಜಿ ಸದಸ್ಯೆ ಆಂಜನಮ್ಮ, ಒಬ್ಬ ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಸುಲ್ತಾನ್ ಪಾಳ್ಯದ ಗಣೇಶ್ ಲೇಔಟ್‌ನಲ್ಲಿ ಅವರು ನೆಲೆಸಿದ್ದರು.
ಮಂಗಳವಾರ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.