ADVERTISEMENT

ಬಾರ್‌, ಪಬ್‌ಗಳಲ್ಲಿ ಧೂಮಪಾನ ನಿಷೇಧ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2019, 20:15 IST
Last Updated 21 ಏಪ್ರಿಲ್ 2019, 20:15 IST
ಸಾಂದರ್ಭೀಕ ಚಿತ್ರ
ಸಾಂದರ್ಭೀಕ ಚಿತ್ರ   

ಬೆಂಗಳೂರು: ಇನ್ನು ಮುಂದೆ ಬಾರ್‌, ಕ್ಲಬ್‌ ಮತ್ತು ಪಬ್‌ಗಳಲ್ಲಿ ಧೂಮಪಾನ ಮಾಡುವಂತಿಲ್ಲ. ಈ ಪ್ರದೇಶಗಳು ‘ಧೂಮಪಾನ ಮುಕ್ತ’ ಎಂದು ಘೋಷಿಸಿ ಅಬಕಾರಿ ಇಲಾಖೆ ಆದೇಶ ಹೊರಡಿಸಿದೆ.

ಧೂಮಪಾನಕ್ಕೆ ಅವಕಾಶ ಕಲ್ಪಿಸುವ ಉದ್ದೇಶ ಹೊಂದಿರುವ ಬಾರ್‌ಗಳ ಮಾಲೀಕರು ಸ್ಥಳೀಯ ಪೌರಾಡಳಿತ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆದು ಪ್ರತ್ಯೇಕ ಸ್ಥಳ ನಿಗದಿಪಡಿಸಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಈ ಆದೇಶ ಪಾಲಿಸದ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಲ್ಲಾ ಜಿಲ್ಲೆಗಳ ಅಬಕಾರಿ ಉಪ ಆಯುಕ್ತರಿಗೆ ಅಬಕಾರಿ ಆಯುಕ್ತರು ನಿರ್ದೇಶನ ನೀಡಿದ್ದಾರೆ.

ADVERTISEMENT

ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಅಗ್ನಿ ಅವಘಡ ತಪ್ಪಿಸುವ ಮತ್ತುಧೂಮಪಾನ ಮಾಡದ ಸಾರ್ವಜನಿಕರ ಆರೋಗ್ಯ ಕಾಪಾಡುವ ಉದ್ದೇಶದಿಂದ ‘ಧೂಮಪಾನ ಮುಕ್ತ ಪ್ರದೇಶ’ ಎಂದು ಘೋಷಿಸುವಂತೆ ಕ್ಯಾನ್ಸರ್ ತಜ್ಞ ಡಾ. ವಿಶಾಲ್ ರಾವ್ ನೇತೃತ್ವದ ತಂಬಾಕು ನಿಯಂತ್ರಣ ಕುರಿತ ರಾಜ್ಯ ಮಟ್ಟದ ಉನ್ನತ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.