ADVERTISEMENT

ಜ.29ಕ್ಕೆ ಮೈಕ್ರೊ ಫೈನಾನ್ಸ್‌ ಹಾವಳಿ ಖಂಡಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ಜನವರಿ 2025, 15:25 IST
Last Updated 27 ಜನವರಿ 2025, 15:25 IST
ಬಡಗಲಪುರ ನಾಗೇಂದ್ರ
ಬಡಗಲಪುರ ನಾಗೇಂದ್ರ   

ಬೆಂಗಳೂರು: ರೈತರಿಗೆ ನೀಡುವ ಸಾಲದ ಪ್ರಮಾಣ ಕಡಿತ ಮಾಡಿರುವ ನಬಾರ್ಡ್‌ ನೀತಿ ಖಂಡಿಸಿ ಹಾಗೂ ಮೈಕ್ರೊ ಫೈನಾನ್ಸ್‌ ಹಾವಳಿ ತಡೆಗಟ್ಟುವಂತೆ ಆಗ್ರಹಿಸಿ ಜನವರಿ 29ರಂದು ನಗರದ ನೃಪತುಂಗ ರಸ್ತೆಯಲ್ಲಿರುವ ರಿಸರ್ವ್‌ ಬ್ಯಾಂಕ್‌ ಪ್ರಾದೇಶಿಕ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ತಿಳಿಸಿದೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ‘ಕೃಷಿ ಕ್ಷೇತ್ರವನ್ನು ಸದೃಢಗೊಳಿಸುವ ಉದ್ದೇಶದಿಂದ ಆರ್ಥಿಕ ನೆರವು ನೀಡಲು ನಬಾರ್ಡ್‌ ಸ್ಥಾಪನೆ ಮಾಡಲಾಗಿದೆ. ಆದರೆ, ಕೃಷಿಗೆ ನೀಡುತ್ತಿದ್ದ ಅಲ್ಪಾವಧಿ ಸಾಲದ ಮೊತ್ತವನ್ನು ಕಡಿತಗೊಳಿಸಲಾಗಿದೆ’ ಎಂದು ದೂರಿದರು.

‘ರಾಜ್ಯದಲ್ಲಿ ಮೈಕ್ರೊ ಫೈನಾನ್ಸ್‌ ಹಾವಳಿ ಮತ್ತು ಕಿರುಕುಳದಿಂದ ಗ್ರಾಮೀಣ ಪ್ರದೇಶದ ಮಹಿಳೆಯರು, ದುಡಿಯುವ ವರ್ಗದ ಜನ ಸಂಕಷ್ಟಕ್ಕೀಡಾಗಿದ್ದಾರೆ. ಮೈಕ್ರೊ ಫೈನಾನ್ಸ್‌ ಸಂಸ್ಥೆಗಳು ನಡೆಸುತ್ತಿರುವ ದೌರ್ಜನ್ಯಕ್ಕೆ ಕಡಿವಾಣ ಹಾಕುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ADVERTISEMENT

ಸಂಘದ ಕಾರ್ಯಾಧ್ಯಕ್ಷ ಜೆ.ಎಂ. ವೀರಸಂಗಯ್ಯ, ಪ್ರಧಾನ ಕಾರ್ಯದರ್ಶಿ ಎನ್.ಡಿ. ವಸಂತಕುಮಾರ್, ಕಾರ್ಯದರ್ಶಿಗಳಾದ ಗೋಪಾಲ್ ಪಾಪೇಗೌಡ, ಅರುಣಕುಮಾರ್ ಸುದ್ದಿಗೋಷ್ಠಿಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.