ADVERTISEMENT

ಭಾಷೆ, ಸಂಸ್ಕೃತಿ ಉಳಿಸಲು ಬದ್ಧ: ಬಿ.ಎಸ್.ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 15 ಜನವರಿ 2020, 20:17 IST
Last Updated 15 ಜನವರಿ 2020, 20:17 IST
ಜಾನಪದ ಜಾತ್ರೆಯಲ್ಲಿ ಪೂಜಾ ಕುಣಿತದ ಪ್ರದರ್ಶನ –ಪ್ರಜಾವಾಣಿ ಚಿತ್ರ
ಜಾನಪದ ಜಾತ್ರೆಯಲ್ಲಿ ಪೂಜಾ ಕುಣಿತದ ಪ್ರದರ್ಶನ –ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಕನ್ನಡ ಭಾಷೆ ಮತ್ತು ಸಂಸ್ಕೃತಿ ಉಳಿಸಿ ಬೆಳೆಸಲು ಸರ್ಕಾರ ಬದ್ಧವಾಗಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಪದ್ಮನಾಭನಗರದಲ್ಲಿ ‌‌ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬುಧವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಜಾನಪದ ಜಾತ್ರೆಯಲ್ಲಿ ಮಾತನಾಡಿದರು.

‘ಮೊದಲ ಬಾರಿಗೆ ಮುಖ್ಯಮಂತ್ರಿ ಆಗಿದ್ದಾಗ ಹಾವೇರಿಯಲ್ಲಿ ಜಾನಪದ ವಿಶ್ವವಿದ್ಯಾಲಯ ಸ್ಥಾಪನೆ ಮಾಡಿದ್ದೆ. ಈಗಲೂ ಕಲಾವಿದರ ಅನುಕೂಲಕ್ಕಾಗಿ ಹಲವು ಯೋಜನೆಗಳನ್ನು ಆರಂಭಿಸಲಾಗಿದೆ’ ಎಂದರು.

ADVERTISEMENT

ಕಂದಾಯ ಸಚಿವ ಆರ್.ಅಶೋಕ, ‘ಪ್ರಧಾನಿ ನರೇಂದ್ರ ಮೋದಿ ಮತ್ತು ಯಡಿಯೂರಪ್ಪ ಅವರು ರಾಜ್ಯದ ಅಭಿವೃದ್ಧಿಗೆ ಜೋಡೆತ್ತುಗಳ ರೀತಿ ಕೆಲಸ ಮಾಡುತ್ತಿದ್ದಾರೆ’ ಎಂದು ಹೇಳಿದರು. ಇದಕ್ಕೂ ಮೊದಲು ಯಡಿಯೂರಪ್ಪ ಎತ್ತಿನ ಗಾಡಿಯಲ್ಲಿ ಕುಳಿತು ಮೆರವಣಿಗೆಯಲ್ಲಿ ಸಾಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.