ಬೆಂಗಳೂರು: ‘ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್) ವತಿಯಿಂದ 2024ರ ಜನವರಿ 6 ಮತ್ತು 7ರಂದು ದಾವಣಗೆರೆಯಲ್ಲಿ 7ನೇ ರಾಜ್ಯಮಟ್ಟದ ಮಹಿಳಾ ಸಮ್ಮೇಳನವನ್ನು ಆಯೋಜಿಸಲಾಗಿದೆ’ ಎಂದು ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷೆ ಅಪರ್ಣಾ ಬಿ.ಆರ್. ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಿ, ಮಹಿಳೆಯರಿಗೆ ಶಿಕ್ಷಣ, ಉದ್ಯೋಗ, ಆರೋಗ್ಯ ಖಚಿತಪಡಿಸಿ, ದುಡಿಯುವ ಮಹಿಳೆಯರಿಗೆ ಕನಿಷ್ಠವೇತನ ಸೇವಾಭದ್ರತೆ ಖಾತ್ರಿಪಡಿಸಿ ಎಂಬ ಘೋಷ ವ್ಯಾಕ್ಯಗಳೊಂದಿಗೆ ಈ ಬಾರಿಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ’ ಎಂದು ಹೇಳಿದರು.
ಸಾಮಾಜಿಕ ಹೋರಾಟಗಾರ್ತಿ ರೂಪ ಹಾಸನ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ರಾಜ್ಯ ಕಾರ್ಯದರ್ಶಿ ಶೋಭಾ ಎಸ್. ಅಧ್ಯಕ್ಷತೆ ವಹಿಸಲಿದ್ದಾರೆ. ಎಂ.ಆರ್. ಹಿರೇಮಠ, ಎಸ್‌ಯುಸಿಐ ರಾಜ್ಯ ಕಾರ್ಯದರ್ಶಿ ಕೆ. ಉಮಾ, ಎಐಎಂಎಸ್‌ಎಸ್ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಛಬ್ಬಿ ಮೊಹಂತಿ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.