ಬೆಂಗಳೂರು: ಕೇಂದ್ರ ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಇಲಾಖೆಯು ಎಚ್‌ಇಐಎಸ್ ಮತ್ತು ಪಾಲಿಟೆಕ್ನಿಕ್ ಶಿಕ್ಷಕರಿಗೆ ನೀಡುವ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ (ಎನ್‌ಎಟಿ) ರಾಜ್ಯದಿಂದ ಇಬ್ಬರು ಆಯ್ಕೆಯಾಗಿದ್ದಾರೆ.
ಕೆಂಗೇರಿ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಎಸ್.ಆರ್. ಕೇಶವ, ಕುಂಬಳಗೋಡು ಕ್ರೈಸ್ಟ್ ಡೀಮ್ಡ್ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಪ್ರಾಧ್ಯಾಪಕಿ ಅನಿತಾ ಸುಸೀಲನ್ ಪ್ರಶಸ್ತಿಗೆ ಆಯ್ಕೆಯಾದವರು. ರಾಷ್ಟ್ರಮಟ್ಟದಲ್ಲಿ ಒಟ್ಟು 16 ಪ್ರಾಧ್ಯಾಪಕರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.