ಬೆಂಗಳೂರು: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ನಿಂದಿಸಿದ ಆರೋಪದ ಅಡಿ ಕೇಂದ್ರ ರೈಲ್ವೆ ಮತ್ತು ಆಹಾರ ಸರಬರಾಜು ಖಾತೆ ರಾಜ್ಯ ಖಾತೆ ಸಚಿವ ರವನೀತ್ ಸಿಂಗ್ ಬಿಟ್ಟು ಅವರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ವಿಜಯನಗರದ ನಿವಾಸಿ ಎಂ.ವಿ.ರವೀಂದ್ರ ಅವರು ನೀಡಿದ ದೂರು ಆಧರಿಸಿ ಪೊಲೀಸರು ರವನೀತ್ ಸಿಂಗ್ ಬಿಟ್ಟು ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
‘ಸೆಪ್ಟೆಂಬರ್ 15ರಂದು ಬಿಹಾರದ ಬಾಗಲ್ಪುರದಲ್ಲಿ ವಂದೇ ಭಾರತ್ ರೈಲು ಸಂಚಾರ ಉದ್ಘಾಟನೆಯ ಬಳಿಕ ನಡೆದ ಸಾರ್ವಜನಿಕ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಕೇಂದ್ರ ಸಚಿವರು ನಿಂದನೆ ಮಾಡಿದ್ದಾರೆ. ಧರ್ಮಗಳ ನಡುವೆ ಸೌಹಾರ್ದ ಹಾಳುಮಾಡಿ ಸಮಾಜದಲ್ಲಿ ಗಲಭೆ ಉಂಟಾಗುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ರಾಹುಲ್ ಹಾಗೂ ಅವರ ಕುಟುಂಬದವರ ಗೌರವಕ್ಕೆ ಧಕ್ಕೆ ಆಗುವ ರೀತಿಯಲ್ಲಿ ಹೇಳಿಕೆ ಕೊಟ್ಟಿದ್ದಾರೆ’ ಎಂದು ಎಫ್‌ಐಆರ್ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.