
ಪ್ರಜಾವಾಣಿ ವಾರ್ತೆ
ಕೆ.ಆರ್.ಪುರ: ಖಾಸಗಿ ಜಮೀನಿನಲ್ಲಿ ಕೊರೆದಿರುವ ಕೊಳವೆಬಾವಿಗೆ ಗ್ರಾಮ ಪಂಚಾಯಿತಿಯ ಆರ್.ಆರ್.ಸಂಖ್ಯೆಯಡಿ ಅನಧಿಕೃತ ವಿದ್ಯುತ್ ಸಂಪರ್ಕ ಪಡೆದ ದೂರಿನ ಹಿನ್ನೆಲೆಯಲ್ಲಿ ಕಣ್ಣೂರು ಗ್ರಾಮ ಪಂಚಾಯತಿ ಸದಸ್ಯ ದೊಡ್ಡಣ್ಣ ಅವರ ಸದಸ್ಯತ್ವ ಅನರ್ಹಗೊಳಿಸಿ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ.
‘ಪ್ರಾದೇಶಿಕ ಆಯುಕ್ತರ ವರದಿ ಪ್ರಕಾರ ಅರ್ಜಿದಾರರ ವಿರುದ್ಧ ಆರೋಪ ಸಾಬೀತಾಗಿಲ್ಲ. ಆದಾಗ್ಯೂ ಸರ್ಕಾರ ಆದೇಶ ಹೊರಡಿಸಿದೆ’ ಎಂದು ಹೇಳಿರುವ ಹೈಕೋರ್ಟ್ ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಡಿ.1ಕ್ಕೆ ನಿಗದಿಪಡಿಸಿ ತಡೆಯಾಜ್ಞೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.