ಪೊಲೀಸ್ – ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಸಿಐಡಿ ಡಿವೈಎಸ್‌ಪಿ ಟಿ.ಕೋದಂಡರಾಮ ಅವರನ್ನು ಕಬ್ಬನ್‌ಪಾರ್ಕ್ ಉಪ ವಿಭಾಗದ ಎಸಿಪಿಯಾಗಿ ಶನಿವಾರ ರಾತ್ರಿ ವರ್ಗಾವಣೆ ಮಾಡಿದ್ದ ಪೊಲೀಸ್ ಇಲಾಖೆ, ಕೆಲವೇ ಕ್ಷಣಗಳಲ್ಲಿ ಆದೇಶವನ್ನು ತಡೆಹಿಡಿದಿದೆ.
ಕಬ್ಬನ್‌ಪಾರ್ಕ್ ಉಪ ವಿಭಾಗಕ್ಕೆ ನಿಯುಕ್ತಿಗೊಳಿಸಲಾಗಿದ್ದು, ತಕ್ಷಣವೇ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಬೇಕು ಎಂದು ಮೊದಲ ಆದೇಶದಲ್ಲಿ ತಿಳಿಸಲಾಗಿತ್ತು. ಅದಾದ ಕೆಲವೇ ಕ್ಷಣಗಳಲ್ಲಿ ಸ್ಥಳ ನಿಯುಕ್ತಿಗೊಳಿಸಿ ಮಾಡಲಾದ ಆದೇಶವನ್ನು ಮುಂದಿನ ಆದೇಶದ ವರೆಗೆ ತಡೆ ಹಿಡಿಯಲಾಗಿದೆ ಎಂದು ಇನ್ನೊಂದು ಆದೇಶದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.