ಬೆಂಗಳೂರು: ಸಾರ್ವಜನಿಕರ ವಾಹನಗಳನ್ನು ಕದ್ದು, ಅದರಲ್ಲೇ ನಗರದಲ್ಲಿ ಸುತ್ತಾಡಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ಆರೋಪದಡಿ ನಾಲ್ವರನ್ನು ಅನ್ನಪೂರ್ಣೇಶ್ವರಿನಗರ ಪೊಲೀಸರು ಬಂಧಿಸಿದ್ದಾರೆ.
‘ಆಕಾಶ್, ದೀಪಕ್, ವಿಜಯ್ ಹಾಗೂ ಮದನ್ಕುಮಾರ್ ಬಂಧಿತರು. ಅವರಿಂದ ₹ 3 ಲಕ್ಷ ಮೌಲ್ಯದ ನಾಲ್ಕು ದ್ವಿಚಕ್ರ ವಾಹನ ಹಾಗೂ 13 ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಇದೇ 4ರಂದು ಠಾಣೆ ವ್ಯಾಪ್ತಿಯಲ್ಲಿ ಸಾರ್ವಜನಿಕರೊಬ್ಬರ ಮೊಬೈಲ್ ಸುಲಿಗೆಮಾಡಲಾಗಿತ್ತು. ನಾಲ್ವರು ಆರೋಪಿಗಳು,ಎರಡು ದ್ವಿಚಕ್ರ ವಾಹನದಲ್ಲಿ ಬಂದು ಕೃತ್ಯ ಎಸಗಿ ಪರಾರಿಯಾಗಿದ್ದರು. ಈ ಬಗ್ಗೆ ಪ್ರಕರಣವೂ ದಾಖಲಾಗಿತ್ತು. ತನಿಖೆ ಕೈಗೊಂಡಾಗ ಸಿಕ್ಕ ಸುಳಿವು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದೂ ಮೂಲಗಳು ತಿಳಿಸಿವೆ.
‘ಠಾಣೆ ವ್ಯಾಪ್ತಿಯಲ್ಲಿ ಈ ಹಿಂದೆಯೂ ಆರೋಪಿಗಳು ಎರಡು ಕಡೆ ಕೃತ್ಯ ಎಸಗಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದೂ ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.