ADVERTISEMENT

‘ಪತ್ರಕರ್ತರಿಗೆ ಸೂರು ಕಲ್ಪಿಸಲು ಕ್ರಮ’

ವಸತಿ ಸಚಿವ ವಿ. ಸೋಮಣ್ಣ ಭರವಸೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2022, 19:39 IST
Last Updated 15 ಅಕ್ಟೋಬರ್ 2022, 19:39 IST
ಎಸ್ಸೆಸ್ಸೆಲ್ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಪಡೆದ ಪತ್ರಕರ್ತರ ಮಕ್ಕಳನ್ನು ವಿ. ಸೋಮಣ್ಣ ಪುರಸ್ಕರಿಸಿದರು. ಐಎಫ್‌ಡಬ್ಲೂಜೆ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನ, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನೂರಾಧ, ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು, ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ. ಸೋಮಶೇಖರ, ಕರ್ನಾಟಕದ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಮತ್ತಿತರರು ಇದ್ದಾರೆ.

ಬೆಂಗಳೂರು: ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದಾಗಿದೆ. ಸೂರಿಲ್ಲದ ಪತ್ರಕರ್ತರಿಗೆ ಸೂರು ಕಲ್ಪಿಸಲು ಸರ್ಕಾರ ಕ್ರಮವಹಿಸಲಿದೆ’ ಎಂದುವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ನಗರದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರ
ಮದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿ.ಯು.ಸಿ
ಪರೀಕ್ಷೆಯಲ್ಲಿ ಶೇ 90ಕ್ಕಿಂತ ಅಧಿಕ ಅಂಕ ಪಡೆದ ಪತ್ರಕರ್ತರ ಮಕ್ಕಳನ್ನು ಪುರಸ್ಕರಿಸಿ, ಮಾತನಾಡಿದರು.

‘ಪತ್ರಕರ್ತರು ದಿನ‌ವೂ ಸವಾಲಿನ ನಡುವೆಯೇ ವೃತ್ತಿಜೀವನ ನಡೆಸುತ್ತಿದ್ದಾರೆ. ಪತ್ರಕರ್ತರು ಸಂವಿಧಾನದ ಅಭಿವ್ಯಕ್ತಿ ಸ್ವಾತಂತ್ರ್ಯದ ವಕ್ತಾರರಾಗಿದ್ದಾರೆ. ಇವರು ಬಹಳಷ್ಟು ಸಮಸ್ಯೆ ಎದುರಿಸುತ್ತಿದ್ದು, ಕೆಲವರು ನಿವೇಶನರಹಿತರಾಗಿಯೂ ಇದ್ದಾರೆ. ಪತ್ರಕರ್ತರಿಗೆ ನಿವೇಶನ ಕಲ್ಪಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರಿನ ನಿವೇಶನರಹಿತ ಪತ್ರಕರ್ತರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿಯ ಜೊತೆ ಸಮಾಲೋಚಿಸಿ, ಶೀಘ್ರವೇ ಕ್ರಮ ತೆಗೆದು
ಕೊಳ್ಳುತ್ತೇನೆ’ ಎಂದರು.

ADVERTISEMENT

ಸಕ್ಕರೆ ಮತ್ತು ಜವಳಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಪ್ರತಿಭಾ ಪುರಸ್ಕಾರಕ್ಕೆ ಚಾಲನೆ ನೀಡಿ, ಶುಭ ಹಾರೈಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.