ಬೆಂಗಳೂರು: ‘ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ರಾಜ್ಯದ ಸಚಿವರೇ ಗಲಭೆಗೆ ಕುಮ್ಮಕ್ಕು ಕೊಡುವಂತಹ ಹೇಳಿಕೆ ನೀಡಿ ಜನರನ್ನು ಪ್ರಚೋದಿಸುತ್ತಿರುವುದು ಖಂಡನೀಯ’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
‘ನಾನು ಇದೀಗ ಕೇರಳದಲ್ಲಿ ಚಿಕಿತ್ಸೆಯಲ್ಲಿದ್ದೇನೆ. ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಮಂಗಳೂರಿನಲ್ಲಿದ್ದು ಜನರಿಗೆ ನೆರವಾಗುತ್ತಿದ್ದಾರೆ. ಅಲ್ಲಿಂದ ಎಲ್ಲ ಮಾಹಿತಿಗಳನ್ನೂ ನನಗೆ ತಿಳಿಸಿದ್ದಾರೆ. ಜನರು ಶಾಂತಿ ಕಾಪಾಡಬೇಕು. ಸರ್ಕಾರ ಕೂಡಾ ಶಾಂತಿ ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.