ಪ್ರಾತಿನಿಧಿಕ ಚಿತ್ರ
ಚಿತ್ರ: ಇನ್‌ಸ್ಟಾಗ್ರಾಂ
ಬೆಂಗಳೂರು: ನಗರದ ಎಚ್.ಕೆ. ಕನ್ಸ್‌ಲ್ಟೆನ್ಸಿ ಸಂಸ್ಥೆ ಹಾಗೂ ಟಾಕ್ಯೋನ್ ಸಿಸ್ಟಂ ಸಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಸಹಭಾಗಿತ್ವದಲ್ಲಿ ‘ಸ್ಟೋಗೋ ಫೆಸ್ಟ್’ ಅನ್ನು ಡಿಸೆಂಬರ್ 9 ಮತ್ತು 10ರಂದು ಹಮ್ಮಿಕೊಳ್ಳಲಾಗಿದೆ ಎಂದು ಸ್ಟೋಗೋ ಫೆಸ್ಟ್ ಸ್ಥಾಪಕ ಜಯೇಶ್ ಸೆಬಾಸ್ಟಿಯನ್ ತಿಳಿಸಿದ್ದಾರೆ
ನಗರದ ಆರ್.ಆರ್.ಸಮೂಹ ಸಂಸ್ಥೆಯ ಕ್ಯಾಂಪಸ್‌ನಲ್ಲಿ ಎರಡು ದಿನ ನಡೆಯುವ ಕಾರ್ಯಕ್ರಮದಲ್ಲಿ 4ರಿಂದ 12ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಬಹುದು. ‘ಮಕ್ಕಳ ಡಿಜಿಟಲ್ ಯೋಗಕ್ಷೇಮಕ್ಕಾಗಿ ಎಐ ಮತ್ತು ರೊಬೋಟಿಕ್ಸ್ ಬಳಕೆ’ಎಂಬ ಥೀಮ್‌ನಡಿ ಈ ಸ್ಪರ್ಧೆ ನಡೆಯಲಿದ್ದು, ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.