ADVERTISEMENT

ಕದ್ದ ಕಾರುಗಳು ಹಳ್ಳಿಗಳಿಗೆ ಮಾರಾಟ | ಮೂವರ ಸೆರೆ: ಆರು ಓಮ್ನಿ ಜಪ್ತಿ

​ಪ್ರಜಾವಾಣಿ ವಾರ್ತೆ
Published 20 ಜೂನ್ 2025, 15:44 IST
Last Updated 20 ಜೂನ್ 2025, 15:44 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ಬೆಂಗಳೂರು: ಓಮ್ನಿ ಕಾರುಗಳನ್ನೇ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಉಮೇಶ್, ತಬ್ರೇಜ್ ಹಾಗೂ ಜಬೀರ್ ಖಾನ್ ಅವರನ್ನು ಬಂಧಿಸಿ, ₹12 ಲಕ್ಷ ಮೌಲ್ಯದ ಒಟ್ಟು ಆರು ಓಮ್ನಿ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಈ ಹಿಂದೆ ಟ್ರಾಕ್ಟರ್‌ಗಳನ್ನು ಕಳ್ಳತನ ಮಾಡುತ್ತಿದ್ದ ಈ ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು 2020ರಲ್ಲಿ ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಜೈಲಿನಿಂದ ಹೊರಬಂದ ಬಳಿಕ ಆರೋಪಿಗಳು, ಹೆಚ್ಚು ಬೇಡಿಕೆ ಇರುವ ಓಮ್ನಿ ಕಾರುಗಳ ಕಳ್ಳತನ ಆರಂಭಿಸಿದ್ದರು.

ನಗರದ ವಿವಿಧೆಡೆ ಕಳವು ಮಾಡುತ್ತಿದ್ದ ಓಮ್ನಿ ಕಾರುಗಳನ್ನು ಹಳ್ಳಿಗಳಲ್ಲಿ ಮಾರಾಟ ಮಾಡುತ್ತಿದ್ದರು. ಮೇ 26 ರಂದು ವಿದ್ಯಾರಣ್ಯಪುರ ಠಾಣೆ ವ್ಯಾಪ್ತಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಓಮ್ನಿ ಕಾರು ಕಳ್ಳತನವಾಗಿತ್ತು. ಮಾಲೀಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಲಾಯಿತು.

ಬಾತ್ಮಿದಾರರ ಮಾಹಿತಿ ಹಾಗೂ ಸಿಸಿಟಿವಿ ಕ್ಯಾಮೆರಾ ಆಧರಿಸಿ ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಈ ಕೃತ್ಯ ಬಯಲಾಗಿದೆ. ಕಡಿಮೆ ಬೆಲೆಗೆ ಕಾರುಗಳನ್ನು ಮಾರಾಟ ಮಾಡುತ್ತಿದ್ದರು ಎಂದು ಪೂರ್ವ ವಲಯದ ಹೆಚ್ಚುವರಿ ಪೊಲೀಸ್ ಕಮಿಷನರ್‌ ರಮೇಶ್ ಬಾನೋತ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.